ದುಬೈ: ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಮೊದಲನೇ ಅಭ್ಯಾಸ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ನಾಳೆ (ಅಕ್ಟೋಬರ್ 20)ರಂದು ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು ಎರಡನೇ ಅಭ್ಯಾಸ ಪಂದ್ಯಕ್ಕೆ ಸೆಣಸಲು ಸಜ್ಜಾಗುತ್ತಿದೆ.
ಇಂಗ್ಲೆಂಡ್ ವಿರುದ್ಧ ಕೆ.ಎಲ್ ರಾಹುಲ್ ಕೇವಲ 24 ಎಸೆತಗಳಲ್ಲಿ 51 ರನ್ ಚೆಚ್ಚಿದ್ದರು ಹಾಗೂ ಇಶಾನ್ ಕಿಶನ್ 46 ಎಸೆತಗಳಲ್ಲಿ 70 ರನ್ ಸಿಡಿಸಿದ್ದರು. ಆ ಮೂಲಕ ಇನ್ನೂ ಒಂದು ಓವರ್ ಬಾಕಿ ಇರುವಾಗಲೇ ಟೀಂ ಇಂಡಿಯಾ ಜಯ ಗಳಿಸಿತ್ತು.
ಮತ್ತೊಂದೆಡೆ ಆಸ್ಟ್ರೇಲಿಯಾ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಕೊನೆಯ ಓವರ್‌ನಲ್ಲಿ 3 ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು. ಸದ್ಯ ಅತ್ಯುತ್ತಮ ಫಾರ್ಮ್‌ನಲ್ಲಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಕಳೆದ ಪಂದ್ಯದಲ್ಲಿ ಆಡಿರಲಿಲ್ಲ. ಹಾಗಾಗಿ ಭಾರತ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಮೈದಾನಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ.
ಉಭಯ ತಂಡಗಳ ಸಂಭಾವ್ಯ ಆಟಗಾರರು:
ಟೀಂ ಇಂಡಿಯಾ: ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಜಸ್‌ಪ್ರಿತ್ ಬುಮ್ರಾ.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೋಯ್ನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಆಸ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಜಾಶ್ ಇಂಗ್ಲೀ, ಪ್ಯಾಟ್ ಕಮಿನ್ಸ್, ಜಾಶ್ ಹೇಝಲ್‌ವುಡ್.
PublicNext
19/10/2021 07:33 pm