ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

T20 ವಿಶ್ವಕಪ್: ಭಾರತ vs ಪಾಕಿಸ್ತಾನ ಪಂದ್ಯ ರದ್ದತಿ ಕೂಗಿಗೆ ಮೌನ ಮುರಿದ ಬಿಸಿಸಿಐ

ನವದೆಹಲಿ: ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯ ಭಾಗವಾಗಿ ಅಕ್ಟೋಬರ್ 24ರಂದು ನಡೆಯಬೇಕಾಗಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯವನ್ನು ರದ್ದು ಮಾಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಈ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೌನ ಮುರಿದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ, "ಐಸಿಸಿ ಆಯೋಜಿಸಿರುವ ಪಂದ್ಯಗಳನ್ನು ನಾವು ಯಾವುದೇ ಕಾರಣಕ್ಕೂ ಆಡುವುದಿಲ್ಲ ಎಂದು ವಿರೋಧಿಸಲು ಸಾಧ್ಯವಿಲ್ಲ. ಪ್ರತಿಯೊಂದು ತಂಡವೂ ಕೂಡ ಐಸಿಸಿ ನಿಯಮದಂತೆ ಪಂದ್ಯವನ್ನು ಆಡಿಯೇ ತೀರಬೇಕಾಗುತ್ತದೆ" ಎಂದು ಸ್ಪಷ್ಟನೆ ನೀಡಿದ್ದಾರೆ.

'ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾಗಿರುವವರಿಗೆ ಸಂತಾಪ ಸೂಚಿಸುತ್ತೇನೆ. ಈ ರೀತಿಯ ದಾಳಿ ಮಾಡಿರುವ ಉಗ್ರ ಸಂಘಟನೆಗಳು ಸರಿಯಾದ ಪಾಠ ಕಲಿಯಲಿವೆ. ಆದರೆ ಕ್ರಿಕೆಟ್ ವಿಚಾರದಲ್ಲಿ ಪಂದ್ಯವನ್ನಾಡದೇ ಹಿಂದೆ ಸರಿಯುವುದು ಸಾಧ್ಯವಿಲ್ಲ" ಎಂದು ಶುಕ್ಲಾ ಹೇಳಿಕೆ ನೀಡಿದ್ದಾರೆ.

Edited By : Vijay Kumar
PublicNext

PublicNext

20/10/2021 10:31 am

Cinque Terre

46.96 K

Cinque Terre

10

ಸಂಬಂಧಿತ ಸುದ್ದಿ