ದುಬೈ: ಟೀಂ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳು ಅಕ್ಟೋಬರ್ 23ರಿಂದ ಆರಂಭಗೊಳ್ಳಲಿದ್ದು, ಇದಕ್ಕೂ ಮುನ್ನ ದುಬೈನ ಐಸಿಸಿ ಅಕಾಡೆಮಿ ಕ್ರೀಡಾಂಗಣದಲ್ಲಿ ಕೆಲ ಅಭ್ಯಾಸ ಪಂದ್ಯಗಳು ನಡೆಯಲಿವೆ. ಟೀಂ ಇಂಡಿಯಾ ಈಗಾಗಲೇ ಇಂಗ್ಲೆಂಡ್ ವಿರುದ್ಧ ಗೆದ್ದು ಬೀಗಿದೆ. ಇಂದು ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಸೆಣಸಾಡಲಿದೆ.
ಇಂದಿನ ಅಭ್ಯಾಸ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸುತ್ತಿದ್ದರೆ, ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿ ತೆಗೆದುಕೊಂಡಿದ್ದಾರೆ. ಉಳಿದಂತೆ ಟೀಂ ಇಂಡಿಯಾದಲ್ಲಿ ತಂಡದಲ್ಲಿ ಬದಲಾವಣೆಯಾಗಿಲ್ಲ.
PublicNext
20/10/2021 03:26 pm