ದುಬೈ: ಸ್ಟೀವನ್ ಸ್ಮಿತ್ ಅರ್ಧ ಶತಕ, ಮಾರ್ಕಸ್ ಸ್ಟೊಯಿನಿಸ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಸಮಯೋಚಿತ ಬ್ಯಾಟಿಂಗ್ ಸಹಾಯದಿಂದ ಆಸ್ಟ್ರೇಲಿಯಾದ ತಂಡವು ಅಭ್ಯಾಸ ಪಂದ್ಯದಲ್ಲಿ ಭಾರತಕ್ಕೆ 153 ರನ್‌ಗಳ ಗುರಿ ನೀಡಿದೆ.
ಐಸಿಸಿ ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಆರನ್ ಫಿಂಚ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ಪಡೆ 5 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಲು ಶಕ್ತವಾಯಿತು.
ಆರ್.ಅಶ್ವಿನ್ ಬೌಲಿಂಗ್ ದಾಳಿಗೆ ತತ್ತರಿಸಿದ ಆಸೀಸ್ ಪಡೆ ಕೇವಲ 11 ರನ್‌ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡಿತು. ಆಗ ತಂಡಕ್ಕೆ ಆಸರೆಯಾಗಿದ್ದು ಸ್ಮಿತ್ ಹಾಗೂ ಮ್ಯಾಕ್ಸ್‌ವೆಲ್ ಜೋಡಿ.
ಆಸೀಸ್ ಪರ ಸ್ಟೀವನ್ ಸ್ಮಿತ್ 57 ರನ್, ಗ್ಲೆನ್ ಮ್ಯಾಕ್ಸ್‌ವೆಲ್ 37 ರನ್ ಹಾಗೂ ಮಾರ್ಕಸ್ ಸ್ಟೊಯಿನಿಸ್ 41 ರನ್ ಗಳಿಸಿದರು. ಇನ್ನು ಭಾರತದ ಪರ ಆರ್. ಅಶ್ವಿನ್ 2 ವಿಕೆಟ್ ಕಿತ್ತರೆ, ರವೀಂದ್ರ ಜಡೇಜಾ, ರಾಹುಕ್ ಚಾಹರ್ ಹಾಗೂ ಭುವನೇಶ್ವರ್ ಕುಮಾರ್ ತಲಾ ಒಂದು ವಿಕೆಟ್ ಪಡೆದುಕೊಂಡರು.
PublicNext
20/10/2021 05:19 pm