ದುಬೈ: ರೋಹಿತ್ ಶರ್ಮಾ ಬಿರುಸಿನ ಅರ್ಧಶತಕ, ಕೆ.ಎಲ್. ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಅಬ್ಬರದ ಬ್ಯಾಟಿಂಗ್ ಸಹಾಯದಿಂದ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಆರನ್ ಫಿಂಚ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ಪಡೆ 5 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಲು ಶಕ್ತವಾಗಿತ್ತು.
153 ರನ್‌ಗಳ ಟಾರ್ಗೆಟ್ ಬೆನ್ನತ್ತಿದ ಟೀಂ ಇಂಡಿಯಾ 13 ಎಸೆತಗಳು ಬಾಕಿ ಇರುವಂತೆ 2ವಿಕೆಟ್ ನಷ್ಟಕ್ಕೆ 153 ಚಚ್ಚಿ ಜಯ ಸಾಧಿಸಿದೆ. ಈ ಮೂಲಕ ಆಡಿದ ಎರಡೂ ಅಭ್ಯಾಸ ಪಂದ್ಯಗಳಲ್ಲಿ ಭಾರತ ಗೆದ್ದು ತನ್ನ ಪ್ರಾಬಲ್ಯ ಮೆರೆದಿದೆ.
ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 60 ರನ್ (ರಿಟೈರ್ಡ್ ಔಟ್), ಕೆ.ಎಲ್.ರಾಹುಲ್ 39 ರನ್, ಸೂರ್ಯಕುಮಾರ್ ಯಾದವ್ 38 ರನ್ ಹಾಗೂ ಹಾರ್ದಿಕ್ ಪಾಂಡ್ಯ 14 ರನ್ ಚಚ್ಚಿದರು.
PublicNext
20/10/2021 07:09 pm