ಇಸ್ಲಾಮಾಬಾದ್: ಪ್ರತಿಷ್ಠಿತ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯು ಕಳೆದ ಭಾನುವಾರದಿಂದ ಆರಂಭವಾಗಿದ್ದು, ಸದ್ಯ ಅರ್ಹತಾ ಸುತ್ತಿನ ಪಂದ್ಯಗಳು ಮತ್ತು ಕೆಲ ಅಭ್ಯಾಸ ಪಂದ್ಯಗಳು ನಡೆಯುತ್ತಿವೆ. ಇನ್ನು ಎಂದಿನಂತೆ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ ಪಂದ್ಯಗಳ ಪೈಕಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ದೊಡ್ಡ ಮಟ್ಟದ ಕುತೂಹಲ ಮತ್ತು ನಿರೀಕ್ಷೆಯನ್ನು ಹುಟ್ಟುಹಾಕಿದೆ. ಈ ಮಧ್ಯೆ ಪಾಕಿಸ್ತಾನ್ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಬೀಸಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ತಮ್ಮ ಯೂ ಟ್ಯೂಬ್ ವಿಡಿಯೋದಲ್ಲಿ ಮಾತನಾಡಿರುವ ಇಂಜಮಾಮ್, "ಟಿ 20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಕಪ್ ಗೆಲ್ಲುವ ಫೇವರೀಟ್ ತಂಡವಾಗಿದೆ. ಭಾರತಕ್ಕೆ ಟ್ರೋಫಿ ಗೆಲ್ಲುವ ಉತ್ತಮ ಅವಕಾಶವಿದೆ. ಯಾವುದೇ ಟೂರ್ನಮೆಂಟ್ನಲ್ಲಿ ಇಂಥದ್ದೇ ಟೀಂ ಗೆಲ್ಲುತ್ತದೆಂದು ಹೇಳುವುದು ಕಷ್ಟ. ಇದೆಲ್ಲವೂ ಎಷ್ಟು ಚಾನ್ಸ್ ಇದೆ ಅನ್ನೋದರ ಮೇಲೆ ನಿರ್ಧಾರವಾಗುತ್ತೆ. ನನ್ನ ಪ್ರಕಾರ ಭಾರತಕ್ಕೆ ಬೇರೆಲ್ಲ ಟೀಂಗಿಂತ ಹೆಚ್ಚಿನ ಗೆಲುವಿನ ಸಾಧ್ಯತೆ ಇದೆ" ಎಂದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ 155 ರನ್ಗಳನ್ನ ಚೇಸ್ ಮಾಡಲು ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿ ಸಹ ಬೇಕಾಗಿರಲಿಲ್ಲ. ಇಂಥ ಸನ್ನಿವೇಶದಲ್ಲಿ ಅವರು ಜಗತ್ತಿನಲ್ಲೇ ತುಂಬಾ ಡೇಂಜರಸ್ ಸೈಡ್ ಎಂದು ಇಂಜಮಾಮ್ ಉಲ್ ಹಕ್ ಹೇಳಿದ್ದಾರೆ.
PublicNext
22/10/2021 08:01 am