ಅಬುಧಾಬಿ : ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭವಾಗಿದ್ದು ಇಂದಿನ ಮೊದಲ ಪದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾಗೆ ಜಯಗಳಿಸಿದೆ. ದ.ಆಫ್ರಿಕಾ ನೀಡಿದ್ದ 119 ರನ್ ಗಳ ಸಾದಾರಣ ಗುರಿಯನ್ನು ಆಸ್ಟ್ರೇಲಿಯಾ 2 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್ ಗಳ ರೋಚಕ ಜಯ ಸಾಧಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಲಿಳಿದ ದಕ್ಷಿಣ ಆಫ್ರಿಕಾ ತಂಡವು ಆಸೀಸ್ ದಾಳಿಗೆ ತತ್ತರಿಸಿ ಹೋಯಿತು. ದಕ್ಷಿಣ ಆಫ್ರಿಕಾ ಪವರ್ ಪ್ಲೇನಲ್ಲೇ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ತಂಡ 23 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಮೂವರು ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಸೇರಿದ್ದರು.
ಸಂಕ್ಷಿಪ್ತ ಸ್ಕೋರ್
ದಕ್ಷಿಣ ಆಫ್ರಿಕಾ: 118/9
ಏಯ್ಡನ್ ಮಾರ್ಕ್ರಮ್: 40
ಜೋಶ್ ಹೇಜಲ್ವುಡ್: 19/2
ಆಸ್ಟ್ರೇಲಿಯಾ: 121/5
ಸ್ಟೀವ್ ಸ್ಮಿತ್: 35
PublicNext
23/10/2021 07:22 pm