ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಕ್ ಪತ್ರಕರ್ತನ ಮೈಚಳಿ ಬಿಡಿಸಿದ ವಿರಾಟ್ : ವಿಡಿಯೋ ವೈರಲ್

ಏಕದಿನ ಮತ್ತು ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಎಂದೂ ಸೋಲು ಕಾಣದ ಭಾರತ ತಂಡ ಇದೇ ಮೊದಲ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ 10 ವಿಕೆಟ್ ಗಳಿಂದ ಸೋಲು ಕಂಡಿದೆ. ಬರೋಬ್ಬರಿ 29 ವರ್ಷಗಳ ಬಳಿಕ ಪಾಕ್ ತಂಡ ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ.

ಇನ್ನು ಪಂದ್ಯದ ಬಳಿಕ ಉಭಯ ತಂಡಗಳ ನಾಯಕರು ಮಾತನಾಡುವುದು ವಾಡಿಕೆ. ಅದರಂತೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರಿಗೆ ಪಾಕಿಸ್ತಾನ ಪತ್ರಕರ್ತ ಪ್ರಶ್ನೆ ಕೇಳಿದ್ದಾರೆ.

'ಈ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ ಬದಲು ಮುಂದಿನ ಪಂದ್ಯದಲ್ಲಿ ಇಶಾನ್ ಕಿಶನ್ ಅವರನ್ನು ಕಣಕ್ಕಿಳಿಸುತ್ತೀರಾ' ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕೊಹ್ಲಿ 'ಟಿ20 ತಂಡದಿಂದ ರೋಹಿತ್ ಶರ್ಮಾ ಅವರನ್ನು ಹೊರಗಿಡಲು ಸಾಧ್ಯವಿದೆಯೇ? ಕಳೆದ ಪಂದ್ಯದಲ್ಲಿ ತಂಡಕ್ಕೆ ರೋಹಿತ್ ನೀಡಿದ ಕೊಡುಗೆ ಏನೆಂಬುದನ್ನು ತಿಳಿದಿದ್ದರೂ ಸಹ ಈ ರೀತಿಯ ನಿರ್ಧಾರ ಕೈಗೊಳ್ಳಲು ಆಗುತ್ತಾ.

ಈ ವಿಷಯದ ಕುರಿತಾಗಿ ನೀವು ವಿವಾದ ಸೃಷ್ಟಿಸುವ ಇಚ್ಛೆ ಇದ್ದರೆ ಮೊದಲೇ ಹೇಳಿ' ಎಂದು ನೇರವಾಗಿ ಮುಖಕ್ಕೆ ಬಡಿದಂತೆ ಹೇಳಿದ್ದಾರೆ.

ಇನ್ನು ಪಂದ್ಯದ ಬಗ್ಗೆ ಮಾತನಾಡಿದ ಕೊಹ್ಲಿ, 'ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದಾಗ ನಾವು ಅಂದುಕೊಂಡಂತೆ ಉತ್ತಮ ಆರಂಭ ಪಡೆದುಕೊಂಡಿಲ್ಲ. 20 ರನ್ ಆಗುವ ವೇಳೆಗೆ ರೋಹಿತ್, ರಾಹುಲ್, ಸೂರ್ಯಕುಮಾರ್ ಹೀಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿಕೊಂಡೆವು. 10 ಓವರ್ ನಂತರ ನಿಧಾನಗತಿಯ ಬ್ಯಾಟಿಂಗ್ ನಡೆಸಿದ ಕಾರಣ ನಮಗೆ ಬೇಕಾಗಿದ್ದ ರನ್ ಪಡೆದುಕೊಳ್ಳಲಾಗಲಿಲ್ಲ.

ಪಾಕ್ ಬ್ಯಾಟಿಂಗ್ ವೇಳೆ ಅವರ ಮೊದಲ 3 ವಿಕೆಟ್ ನಮಗೆ ಬೇಕಾಗಿತ್ತು. ಆದರೆ ಆ ಅವಕಾಶವನ್ನು ಬಾಬರ್ ಟೀಮ್ ನೀಡಲೇ ಇಲ್ಲ'

'ಶಾಹಿನ್ ಅಫ್ರಿದಿ ಅವರು ಹೊಸ ಚೆಂಡನ್ನು ಟಿ20 ಕ್ರಿಕೆಟ್ ನಲ್ಲಿ ಯಾವ ರೀತಿ ಬಳಸಬೇಕು ಎಂಬುದನ್ನು ಅರಿತಿದ್ದು ಯಶಸ್ವಿಯಾಗಿ ಬೌಲಿಂಗ್ ಮಾಡಿದರು.

ನಮ್ಮ ತಂಡದ ಬೌಲಿಂಗ್ ವೇಳೆ ಇಬ್ಬನಿಯ ತೊಂದರೆ ಇದ್ದ ಕಾರಣ ಬೌಲಿಂಗ್ ಪರಿಣಾಮಕಾರಿಯಾಗಿರಲಿಲ್ಲ, ಪಾಕಿಸ್ತಾನ ತಂಡ ನಮಗಿಂತ ಉತ್ತಮ ಆಟವನ್ನು ಆಡಿತು ಎಂಬ ಸತ್ಯವನ್ನು ಒಪ್ಪಿಕೊಳ್ಳುವಲ್ಲಿ ಯಾವುದೇ ನಾಚಿಕೆ ಇರಬಾರದು. ಮುಂದಿನ ಪಂದ್ಯದಲ್ಲಿ ತಪ್ಪುಗಳನ್ನು ಸರಿಪಡಿಸಿ ಕಮ್ ಬ್ಯಾಕ್ ಮಾಡುತ್ತೇವೆ' ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

Edited By : Nirmala Aralikatti
PublicNext

PublicNext

25/10/2021 11:21 am

Cinque Terre

80.67 K

Cinque Terre

5

ಸಂಬಂಧಿತ ಸುದ್ದಿ