ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಕ್‌ ಗೆದ್ದಿದ್ದಕ್ಕೆ ಭಾರತದಲ್ಲಿ ಪಟಾಕಿ ಸಿಡಿಸಿದ ಕಿಡಿಗೇಡಿಗಳ ವಿರುದ್ಧ ಸೆಹ್ವಾಗ್ ಕಿಡಿ

ನವದೆಹಲಿ: ಟಿ-20 ವಿಶ್ವಕಪ್‌ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪಾಕಿಸ್ತಾನ ತಂಡವು ಭಾರತದ ವಿರುದ್ಧ ಮೊದಲ ಬಾರಿಗೆ (ನಿನ್ನೆ) ಗೆಲುವು ಸಾಧಿಸಿದೆ. ಆದರೆ ಪಾಕಿಸ್ತಾನ ಜಯ ಸಾಧಿಸಿದ ನಂತರ ಭಾರತದ ಕೆಲವು ಭಾಗಗಳಲ್ಲಿ ಕಿಡಿಗೇಡಿಗಳು ಪಟಾಕಿ ಸಿಡಿಸಿದ್ದಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಿಡಿಕಾರಿದ್ದಾರೆ.

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಿನ್ನೆ (ಭಾನುವಾರ) ನಡೆದ ಟಿ-20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಪಾಕಿಸ್ತಾನ 10 ವಿಕೆಟ್‌ಗಳಿಂದ ಗೆಲುವು ಸಾಧಿಸಿತು. ಆ ಬಳಿಕ ಟ್ವೀಟ್ ಮಾಡಿದ ವೀರೇಂದ್ರ ಸೆಹ್ವಾಗ್, "ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ನಿರ್ಬಂಧಿಸಲಾಗಿದೆ. ಆದರೆ ನಿನ್ನೆ ದಿನ ದೇಶದ ಕೆಲವು ಕಡೆಗಳಲ್ಲಿ ಪಟಾಕಿ ಸಿಡಿಸುವುದರೊಂದಿಗೆ ಪಾಕಿಸ್ತಾನ ಗೆಲುವನ್ನು ಸಂಭ್ರಮಿಸಲಾಗಿದೆ. ಕ್ರಿಕೆಟ್ ಗೆಲುವಿನ ಸಂಭ್ರಮಾಚರಣೆ ಒಳ್ಳೆಯದು. ಆದರೆ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಏನು ಹಾನಿಯಾಗುತ್ತದೆ. ಇದರ ಹಿಂದೆ ಹಿಪೋಕ್ರಸಿ ಇದೆ" ಎಂದು ಅಸಮಾಧಾನ ಹೊರ ಹಾಕಿದ್ದಾರೆ.

Edited By : Vijay Kumar
PublicNext

PublicNext

25/10/2021 04:15 pm

Cinque Terre

29.11 K

Cinque Terre

7

ಸಂಬಂಧಿತ ಸುದ್ದಿ