ಮುಂಬೈ: ಕನ್ನಡಿಗ, ಕ್ರಿಕೆಟ್ ದಂತಕಥೆ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್ ಅವರು ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತಗೊಂಡಿದೆ.
ಹೌದು. ಮುಖ್ಯ ಕೋಚ್ ಸ್ಥಾನಕ್ಕಾಗಿ ರಾಹುಲ್ ದ್ರಾವಿಡ್ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಅರ್ಜಿ ಸಲ್ಲಿಸಿದ್ದಾರೆ. ಟೀಂ ಇಂಡಿಯಾ ಹೆಡ್ ಕೋಚ್ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಅವರು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರ ಏಕೈಕ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅರ್ಜಿ ಸಲ್ಲಿಸಲು ಕೊನೆಯ ದಿನವಾದ ಇಂದು ರಾಹುಲ್ ಔಪಚಾರಿಕವಾಗಿ ಹೆಡ್ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಎನ್‌ಸಿಎಯ ಬೌಲಿಂಗ್ ಕೋಚ್ ಪಾರಸ್ ಮತ್ತು ಫೀಲ್ಡಿಂಗ್ ಕೋಚ್ ಅಭಯ್ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿ ಕೇವಲ ಔಪಚಾರಿಕವಾಗಿದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿ ಮಂಗಳವಾರ ತಿಳಿಸಿದ್ದಾರೆ.
PublicNext
26/10/2021 06:24 pm