ಶಾರ್ಜಾ: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಮ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯ 19ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿವೆ. ಪಾಕಿಸ್ತಾನ ತಂಡವು ಈಗಾಗಲೇ ಒಂದು ಪಂದ್ಯ (ಭಾರತದ ವಿರುದ್ಧ) ಆಡಿ ಅದರಲ್ಲಿ ಗೆಲುವು ಸಾಧಿಸಿದೆ. ಇನ್ನು ನ್ಯೂಜಿಲೆಂಡ್ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಆಡುತ್ತಿದೆ.
ತಂಡಗಳು ಹೀಗಿವೆ:
ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಶಾದಾಬ್ ಖಾನ್, ಇಮಾದ್ ವಾಸಿಮ್, ಹಸನ್ ಅಲಿ, ಹ್ಯಾರಿಸ್ ರೌಫ್, ಶಾಹೀನ್ ಶಾ ಆಫ್ರಿದಿ.
ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಕೇನ್ ವಿಲಿಯಮ್ಸನ್ (ನಾಯಕ), ಟೀಮ್ ಸೀಫರ್ಟ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ಇಶ್ ಸೋಧಿ.
PublicNext
26/10/2021 07:26 pm