ಶಾರ್ಜಾ: ಹ್ಯಾರಿಸ್ ರೌಫ್ ಬೌಲಿಂಗ್ ದಾಳಿಗೆ ತತ್ತರಿಸಿದ ನ್ಯೂಜಿಲ್ಯಾಂಡ್ ತಂಡವು ಪಾಕಿಸ್ತಾನಕ್ಕೆ 135 ರನ್‌ಗಳ ಸಾಧಾರಣ ಮೊತ್ತದ ಗುರಿ ನೀಡಿದೆ.
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯ 19ನೇ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಮ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ತಂಡವು 8 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಲು ಶಕ್ತವಾಯಿತು.
ಕೀವಿಸ್ ತಂಡದ ಪರ ಡ್ಯಾರಿಲ್ ಮಿಚೆಲ್ ಹಾಗೂ ಡೆವೊನ್ ಕಾನ್ವೇ ತಲಾ 27 ರನ್ ಗಳಿಸಿದರೆ, ನಾಯಕ ಕೇನ್ ವಿಲಿಯಮ್ಸನ್ 25 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನುಳಿದ ಆಟಗಾರರು ಮೈದಾನಕ್ಕೆ ಇಳಿದಿದ್ದೇ ತಡ ವಿಕೆಟ್ ಒಪ್ಪಿಸಿ ಪೆವಿಲಿಯನ್ ಕಡೆಗೆ ಪರೇಡ್ ನಡೆಸಿದರು. ಇನ್ನು ಪಾಕಿಸ್ತಾನದ ಪರ ಹ್ಯಾರಿಸ್ ರೌಫ್ 4 ಬೌಲಿಂಗ್ ಮಾಡಿ ಕೇವಲ 22 ರನ್ ನೀಡಿ ಪ್ರಮುಖ 4 ವಿಕೆಟ್ ಉರುಳಿಸಿದರು. ಉಳಿದಂತೆ ಶಾಹೀನ್ ಶಾ ಆಫ್ರಿದಿ, ಇಮಾದ್ ವಾಸಿಮ್ ಹಾಗೂ ಮೊಹಮ್ಮದ್ ಹಫೀಜ್ ತಲಾ ಒಂದು ವಿಕೆಟ್ ಕಿತ್ತರು.
PublicNext
26/10/2021 09:15 pm