ಅಬುಧಾಬಿ: ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ಮಹಮ್ಮದುಲ್ಲಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಟಿ20 ವಿಶ್ವಕಪ್‌ನ ಸೂಪರ್ 12 ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಇಂದು ಮುಖಾಮುಖಿಯಾಗಿವೆ. ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸುವ ಮೂಲಕ ಇಂಗ್ಲೆಂಡ್ ಪಂದ್ಯಾವಳಿಯಲ್ಲಿ ಉತ್ತಮ ಆರಂಭವನ್ನು ಮಾಡಿದೆ. ಮತ್ತೊಂದೆಡೆ ಬಾಂಗ್ಲಾದೇಶ ತನ್ನ ಮೊದಲ ಪಂದ್ಯದಲ್ಲಿ (ಶ್ರೀಲಂಕಾ ವಿರುದ್ಧ) ಸೋಲನ್ನು ಎದುರಿಸಬೇಕಾಯಿತು. ವಿಶೇಷವೆಂದರೆ ಉಭಯ ತಂಡಗಳು ಇದೇ ಮೊದಲ ಬಾರಿಗೆ ಟಿ20 ಮಾದರಿ ಕ್ರಿಕೆಟ್‌ನಲ್ಲಿ ಮುಖಾಮುಖಿಯಾಗಿವೆ.
ತಂಡ ಹೀಗಿದೆ:
ಬಾಂಗ್ಲಾದೇಶ ಪ್ಲೇಯಿಂಗ್ ಇಲೆವೆನ್: ಮೊಹಮ್ಮದ್ ನಯೀಮ್, ಲಿಟನ್ ದಾಸ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ, ಅಫೀಫ್ ಹೊಸೈನ್, ನೂರುಲ್ ಹಸನ್, ಮೆಹದಿ ಹಸನ್, ಶೋರಿಫುಲ್ ಇಸ್ಲಾಂ, ಮುಸ್ತಾಫಿಜುರ್ ರೆಹಮಾನ್, ನಸುಮ್ ಅಹ್ಮದ್
ಇಂಗ್ಲೆಂಡ್ ಪ್ಲೇಯಿಂಗ್ XI – ಜೇಸನ್ ರಾಯ್, ಜೋಸ್ ಬಟ್ಲರ್, ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಟಿಮಲ್ ಮಿಲ್ಸ್
PublicNext
27/10/2021 03:43 pm