ನವದೆಹಲಿ: ಟಿ20 ವಿಶ್ವಕಪ್ ಟೂರ್ನಿ ಮುಗಿದ ಕೂಡಲೇ ಮುಂದಿನ ವರ್ಷದ ಐಪಿಎಲ್‌ನ ಹವಾ ಜೋರಾಗಲಿದೆ. ಈಗಾಗಲೇ ಎರಡು ಹೊಸ ತಂಡಗಳ ಸೇರ್ಪಡೆಯಾಗಿದ್ದು, ಡಿಸೆಂಬರ್ನಲ್ಲಿ ಆಟಗಾರರ ಹರಾಜು ನಡೆಯಲಿದೆ. 2022ರ ಏಪ್ರಿಲ್ ತಿಂಗಳಲ್ಲಿ ಐಪಿಎಲ್‌ನ 15ನೇ ಸೀಸನ್ ಪಂದ್ಯಾವಳಿ ಪ್ರಾರಂಭವಾಗುವ ನಿರೀಕ್ಷೆ ಇದೆ. ಹಾಲಿ ಇರುವ ಎಂಟು ತಂಡಗಳ ಜೊತೆ ಲಕ್ನೋ ಹಾಗೂ ಅಹಮದಾಬಾದ್ ತಂಡಗಳ ಸೇರ್ಪಡೆಯೊಂದಿಗೆ ಒಟ್ಟು 10 ತಂಡಗಳು ಸ್ಪರ್ಧೆ ನಡೆಸುತ್ತವೆ.
ವರದಿಗಳ ಪ್ರಕಾರ, ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ತನ್ನ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಕೈಬಿಡುವ ಸಾಧ್ಯತೆಯಿದೆ. ಮೂವರು ಆಟಗಾರರನ್ನು ಉಳಿಸಿಕೊಳ್ಳುವ ಮತ್ತು ಒಂದು ರೈಟ್ ಟು ಮ್ಯಾಚ್ (ಆರ್‌ಟಿಎಂ) ಕಾರ್ಡ್ ನೀತಿಯನ್ನು ಬಿಸಿಸಿಐ ಆಳವಡಿಸುವ ಸಾಧ್ಯತೆಯಿದೆ. ಹಾಗೊಂದು ವೇಳೆ ಆರ್‌ಟಿಎಂ ಕಾರ್ಡ್ ಇಲ್ಲದಿದ್ದರೆ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳುವ ನೀತಿ ಪ್ರಕಟಿಸುವ ಸಾಧ್ಯತೆಯಿದೆ.
ಮುಂಬೈ ಉಳಿಸಿಕೊಳ್ಳುವ ಪ್ರಮುಖ ಆಟಗಾರರ ಸಾಲಿನಲ್ಲಿ ನಾಯಕ ರೋಹಿತ್ ಶರ್ಮಾ, ಜಸ್‌ಪ್ರೀತ್ ಬೂಮ್ರಾ ಜೊತೆಗೆ ಕೀರಾನ್ ಪೊಲಾರ್ಡ್ ಮೂರನೇ ಆಯ್ಕೆಯಾಗಲಿದ್ದಾರೆ ಎಂದು ಐಪಿಎಲ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಾರ್ದಿಕ್ ಪಾಂಡ್ಯರನ್ನು ಉಳಿಸಿಕೊಳ್ಳುವ ಸಾಧ್ಯತೆ ಶೇಕಡಾ 10ಕ್ಕಿಂತಲೂ ಕಡಿಮೆಯಾಗಿದೆ. ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಅವರನ್ನು ಪರಿಗಣಿಸುವ ಸಾಧ್ಯತೆ ಕಡಿಮೆಯಾಗಿದೆ. ನಾಲ್ಕು ಆಟಗಾರರನ್ನು ಉಳಿಸಿಕೊಳ್ಳುವ ಅಥವಾ ಆರ್‌ಟಿಎಂ ಕಾರ್ಡ್ ಇದ್ದರೆ ಆ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಕಠಿಣ ಸ್ಪರ್ಧಿಗಳಾಗಿದ್ದಾರೆ ಎಂದು ವಿವರಿಸಿದ್ದಾರೆ.
PublicNext
28/10/2021 08:28 pm