ದುಬೈ: ಕುಸಲ್ ಪೆರೆರಾ ಹಾಗೂ ಪಾತುಮ್ ನಿಸಂಕ ಉತ್ತಮ ಜೊತೆಯಾಟದಿಂದ ಶ್ರೀಲಂಕಾ ತಂಡವು ಆಸ್ಟ್ರೇಲಿಯಾ ತಂಡಕ್ಕೆ 155 ರನ್‌ಗಳ ಗುರಿ ನೀಡಿದೆ.
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯ 22ನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆರನ್ ಫಿಂಚ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡವು 6 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿದೆ.
ಶ್ರೀಲಂಕಾ ಪರ ಕುಸಲ್ ಪೆರೆರಾ, ಪಾತುಮ್ ನಿಸಂಕ ತಲಾ 35 ರನ್ ಹಾಗೂ ಭಾನುಕಾ ರಾಜಪಕ್ಸೆ ಅಜೇಯ 33 ರನ್ ಗಳಿಸಿದರು. ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ ಹಾಗೂ ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್ ತಲಾ ಎರಡು ವಿಕೆಟ್ ಕಿತ್ತರು.
PublicNext
28/10/2021 09:15 pm