ಬೆಂಗಳೂರು: ಸ್ಯಾಂಡಲ್‌ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಕನ್ನಡದ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಎರಗಿದೆ. ಇದರಿಂದ ಕನ್ನಡ ಚಿತ್ರರಂಗ, ಕನ್ನಡ ನಾಡು ಅಪಾರ ನಷ್ಟಕ್ಕೊಳಗಾಗಿದ್ದು, ಅಭಿಮಾನಿಗಳು ಕಣ್ಣೀರು ಸುರಿಸುತ್ತಿದ್ದಾರೆ.
ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಕ್ರಿಕೆಟಿಗರು ಸಂತಾಪ ಸೂಚಿಸುತ್ತಿದ್ದಾರೆ. ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್, ವೀರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್, ಆರ್.ವಿನಯ್ ಕುಮಾರ್ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆ, "ಪುನೀತ್ ಸಾವಿನ ಸುದ್ದಿ ಕೇಳಿ ಅತೀವ ನೋವಾಗಿದೆ. ಅವರ ನಿಧನದಿಂದ ಚಿತ್ರರಂಗವು ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ. ನನ್ನ ಜೀವನದಲ್ಲೇ ಭೇಟಿಯಾದ ಅದ್ಭುತ ವ್ಯಕ್ತಿ ಪುನೀತ್. ತುಂಬಾ ರೋಮಾಂಚಕ ಮತ್ತು ವಿನಮ್ರ ವ್ಯಕ್ತಿ. ಆದರೆ ನಮ್ಮ ಬಿಟ್ಟು ಬೇಗ ತುಂಬಾ ಬೇಗ ಬಿಟ್ಟರು. ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ" ಎಂದು ಕಂಬನಿ ಮಿಡಿದಿದ್ದಾರೆ.
PublicNext
29/10/2021 03:25 pm