ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಸ್ಟ್ರೇಲಿಯಾ ವಿರುದ್ಧ 8 ವಿಕೆಟ್‌ಗಳ ಜಯ ಸಾಧಿಸಿದ ಇಂಗ್ಲೆಂಡ್

ಹಾಲಿ ಏಕದಿನ ವಿಶ್ವಕಪ್ ಚಾಂಪಿಯನ್ಸ್ ಎನಿಸಿಕೊಂಡಿರುವ ಇಂಗ್ಲೆಂಡ್ ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ ಪಂದ್ಯದಲ್ಲಿ 8 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದೆ.

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪ್ರತಿಷ್ಠಿತ ಟಿ 20 ವಿಶ್ವಕಪ್ ಟೂರ್ನಿಯ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 125 ರನ್‌ಗಳಿಗೆ ಆಲ್ಔಟ್ ಆದರು. ಹೀಗೆ ಆಸ್ಟ್ರೇಲಿಯಾ ನೀಡಿದ 126 ರನ್‌ಗಳ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ಪರ ಆರಂಭಿಕ ಆಟಗಾರರಾಗಿ ಜೇಸನ್ ರಾಯ್ ಮತ್ತು ಜೋಸ್ ಬಟ್ಲರ್ ಕಣಕ್ಕಿಳಿದರು. ಜೇಸನ್ ರಾಯ್ 22 ರನ್‌ಗಳಿಗೆ ಔಟ್ ಆದರೆ, ಜೋಸ್ ಬಟ್ಲರ್ 32 ಎಸೆತಗಳಲ್ಲಿ ಅಜೇಯ 71 ರನ್ ಗಳಿಸುವುದರ ಮೂಲಕ ಅಬ್ಬರಿಸಿದರು. ಜೋಸ್ ಬಟ್ಲರ್ 5 ಬೌಂಡರಿ ಮತ್ತು 5 ಸಿಕ್ಸರ್ ಚಚ್ಚಿದರು. ಇನ್ನುಳಿದಂತೆ ಡೇವಿಡ್ ಮಲನ್ 8 ಮತ್ತು ಜಾನಿ ಬೇರ್‌ಸ್ಟೋ ಅಜೇಯ 16 ರನ್ ಗಳಿಸಿದರು.

ಈ ಮೂಲಕ ಇಂಗ್ಲೆಂಡ್ ಕೇವಲ 11.4 ಓವರ್‌ಗಳಲ್ಲಿಯೇ ಆಸ್ಟ್ರೇಲಿಯಾ ನೀಡಿದ್ದ 126 ರನ್‌ಗಳ ಗುರಿಯನ್ನು ವೇಗವಾಗಿ ಮುಟ್ಟಿತು. ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ 17 ರನ್ ನೀಡಿ 3 ವಿಕೆಟ್ ಪಡೆದ ಇಂಗ್ಲೆಂಡ್ ತಂಡದ ಪ್ರಮುಖ ಬೌಲರ್ ಕ್ರಿಸ್ ಜೋರ್ಡನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Edited By : Nagaraj Tulugeri
PublicNext

PublicNext

31/10/2021 12:13 am

Cinque Terre

35.48 K

Cinque Terre

0