ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

T20 WC: IND vs NZ: ಟೀಂ ಇಂಡಿಯಾ ಬ್ಯಾಟಿಂಗ್‌ನಲ್ಲಿ ಮತ್ತೆ ಫ್ಲಾಪ್- ಕಿವೀಸ್ ಗೆ 111 ರನ್‌ಗಳ ಗುರಿ

ದುಬೈ: ಕೆ.ಎಲ್.ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಪ್ರಮುಖ ಆಟಗಾರರ ಬ್ಯಾಟಿಂಗ್ ವೈಫಲ್ಯದಿಂದ ಭಾರತ ತಂಡವು ನ್ಯೂಜಿಲೆಂಡ್ ಗೆ 111 ರನ್‌ಗಳ ಸಾಧಾರಣ ಮೊತ್ತದ ಗುರಿ ನೀಡಿದೆ.

ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ಇಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್‌ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಕಿವೀಸ್ ತಂಡವು ಭಾರತದ ಬ್ಯಾಟರ್ ಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು.

ಭಾರತವು 7 ವಿಕೆಟ್ ನಷ್ಟಕ್ಕೆ ಕೇವಲ .110 ರನ್ ಗಳಿಸಲು ಶಕ್ತವಾಯಿತು. ಭಾರತದ ಪರ ರವೀಂದ್ರ ಜಡೇಜಾ ಅಜೇಯ 26 ರನ್ ಹಾಗೂ ಹಾರ್ದಿಕ್ ಪಾಂಡ್ಯ 23 ರನ್ ಗಳಿಸಿದರೆ, ಉಳಿದ ಆಟಗಾರರು 20 ರನ್‌ಗಳ ಗಡಿ ದಾಟಲು ವಿಫಲರಾದರು.

Edited By : Nagaraj Tulugeri
PublicNext

PublicNext

31/10/2021 09:23 pm

Cinque Terre

90.3 K

Cinque Terre

22

ಸಂಬಂಧಿತ ಸುದ್ದಿ