ನವದೆಹಲಿ: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ಅವರು ಟೀಂ ಇಂಡಿಯಾ ಟಿ20 ಹಾಗೂ ಏಕದಿನ ಕ್ರಿಕೆಟ್ ನಾಯಕತ್ವದಿಂದ ಕೆಳಗೆ ಇಳಿಯಲಿದ್ದಾರೆ. ಹೀಗಾಗಿ ಶೀಘ್ರವೇ ಬಿಸಿಸಿಐ ಹೊಸ ನಾಯಕನ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಏಕದಿನ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ಅವರೇ ನಾಯಕರಾಗಿ ಮುಂದುವರೆಯುತ್ತಾರೆ ಎನ್ನಲಾಗಿತ್ತು. ಆದರೆ ಸದ್ಯದ ಮಾಹಿತಿಯ ಪ್ರಕಾರ ಕೊಹ್ಲಿ ಅವರನ್ನು ಏಕದಿನ ಕ್ರಿಕೆಟ್ ನಾಯಕತ್ವ ಸ್ಥಾನದಿಂದ ಕೆಳಗಿಳಿಸಿ ರೋಹಿತ್ ಶರ್ಮಾ ಅವರಿಗೆ ಮಹತ್ವದ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ಇದರೊಂದಿಗೆ ಏಕದಿನ ಮತ್ತು ಟಿ20 ಎರಡೂ ಮಾದರಿಯ ಕ್ರಿಕೆಟ್ನಲ್ಲಿ ರೋಹಿತ್ ಶರ್ಮಾ ನಾಯಕರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
PublicNext
02/11/2021 03:06 pm