ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿವೀಸ್ ವಿರುದ್ಧದ ಟಿ20 ಸರಣಿ: ಟೀಂ ಇಂಡಿಯಾಗೆ ಕನ್ನಡಿಗ ನಾಯಕ.?

ಬೆಂಗಳೂರು: ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯದ ಬಳಿಕ ಟೀಂ ಇಂಡಿಯಾ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಇದಾದ ಬಳಿಕ ಎರಡು ಪಂದ್ಯಗಳ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾವನ್ನು ಕನ್ನಡಿಗ ಕೆ.ಎಲ್‌. ರಾಹುಲ್‌ ಮುನ್ನಡೆಸಲಿದ್ದಾರೆ ಎನ್ನಲಾಗಿದೆ.

ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗರು ದೀರ್ಘಕಾಲದಿಂದ ಬಿಡುವಿರದ ಕ್ರಿಕೆಟ್ ಆಡುತ್ತಿದ್ದಾರೆ. ಬಯೋ ಬಬಲ್‌ನಿಂದ ಕೊಂಚ ಬಿಡುವ ಕೊಡುವ ಉದ್ದೇಶದಿಂದ ನ್ಯೂಜಿಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಲ್ಲಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ದಟ್ಟವಾಗಿದೆ. ಇತ್ತ ಟಿ20 ವಿಶ್ವಕಪ್‌ ಬಳಿಕ ಟೀಂ ಇಂಡಿಯಾ ಟಿ20 ನಾಯಕತ್ವದಿಂದ ಕೆಳಗಿಳಿಯುವುದಾಗಿ ವಿರಾಟ್ ಕೊಹ್ಲಿ ಈಗಾಗಲೇ ಘೋಷಿಸಿದ್ದಾರೆ. ಇನ್ನು ಕಿವೀಸ್ ಎದುರಿನ ಸರಣಿಗೆ ರೋಹಿತ್ ಶರ್ಮಾ ಕೂಡಾ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಹೀಗಾಗಿ ಇದೇ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಟಿ20 ಸರಣಿಗೆ ಕನ್ನಡಿಗ ಕೆ.ಎಲ್‌. ರಾಹುಲ್‌ಗೆ ನಾಯಕ ಪಟ್ಟ ಕಟ್ಟುವ ಸಾಧ್ಯತೆ ದಟ್ಟವಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ಸರಣಿ ಯಾವಾಗ?:

ನವೆಂಬರ್ 17ರಂದು ಜೈಪುರದಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ಇದಾದ ಬಳಿಕ ನವೆಂಬರ್ 19ರಂದು ರಾಂಚಿಯಲ್ಲಿ ಹಾಗೂ ನವೆಂಬರ್ 21ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ ಮೈದಾನದಲ್ಲಿ ಕೊನೆಯ ಟಿ20 ಪಂದ್ಯ ನಡೆಯಲಿದೆ. ಬಳಿಕ ಕಿವೀಸ್ ತಂಡವು ಭಾರತ ವಿರುದ್ದ 2 ಪಂದ್ಯಗಳ ಟೆಸ್ಟ್ ಚಾಂಪಿಯನ್‌ನಲ್ಲಿ ಪಾಲ್ಗೊಳ್ಳಲಿದ್ದು, ಮೊದಲ ಟೆಸ್ಟ್ ಪಂದ್ಯವು ನವೆಂಬರ್ 25ರಿಂದ 29ರವರೆಗೆ ಕಾನ್ಪುರದ ಗ್ರೀನ್ ಪಾರ್ಕ್‌ನಲ್ಲಿ ನಡೆದರೆ, ಡಿಸೆಂಬರ್ 03ರಿಂದ 07ರವರೆಗೆ ಮುಂಬೈನ ವಾಂಖೆಡೆ ಮೈದಾನದಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ.

Edited By : Vijay Kumar
PublicNext

PublicNext

02/11/2021 07:05 pm

Cinque Terre

22.15 K

Cinque Terre

1

ಸಂಬಂಧಿತ ಸುದ್ದಿ