ಅಬುಧಾಬಿ: ನಮೀಬಿಯಾ ವಿರುದ್ಧದ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಮ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಅಬುಧಾಬಿಯ ಶೈಖ್ ಝಾಯೆದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟಿ20 ವಿಶ್ವಕಪ್ ಟೂರ್ನಿಯ 31ನೇ ಪಂದ್ಯದಲ್ಲಿ ಇಂದು ಬಲಿಷ್ಠ ಪಾಕಿಸ್ತಾನ ಮತ್ತು ನಮೀಬಿಯಾ ತಂಡಗಳು ಮುಖಾಮುಖಿಯಾಗಿವೆ. ಪಾಕಿಸ್ತಾನವು ಈಗಾಗಲೇ ಸತತ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಗ್ರೂಪ್-2ನಲ್ಲಿ ಅಗ್ರಸ್ಥಾನದಲ್ಲಿದೆ. ಜೊತೆಗೆ ಸೆಮಿಫೈನಲ್ ಪ್ರವೇಶವನ್ನು ಖಚಿತಪಡಿಸಿಕೊಂಡಿದೆ. ಇತ್ತ ನಮೀಬಿಯಾ ಆಡಿದ ಎರಡು ಪಂದ್ಯಗಳ ಪೈಕಿ ಒಂದರಲ್ಲಿ ಗೆದ್ದು ಎರಡು ಅಂಕ ಪಡೆದು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
PublicNext
02/11/2021 07:17 pm