ದೆಹಲಿ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪುತ್ರಿ ಮೇಲೆ ಆನ್ ಲೈನ್ ನಲ್ಲಿ ಅತ್ಯಾಚಾರದ ಬೆದರಿಕೆಗಳು ಬಂದಿವೆ.
ಟಿ20 ವಿಶ್ವಕಪ್ ಪಂದ್ಯದಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ ಸೋತಿದೆ. ಈ ವೇಳೆ ಸಹ ಆಟಗಾರ ಮೊಹಮ್ಮದ್ ಶಮಿ ವಿರುದ್ಧ ಟೀಕಾಪ್ರಹಾರಗಳು ನಡೆದಿತ್ತು. ಈ ವೇಳೆ ಶಮಿಗೆ ಬೆಂಬಲವಾಗಿ ನಿಂತಿದ್ದಕ್ಕೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮಗಳ ಮೇಲೆ ಅತ್ಯಾಚಾರ ಬೆದರಿಕೆ ಬಂದಿದ್ದು, ವಿರಾಟ್ ಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
“ಪ್ರಿಯ ವಿರಾಟ್, ಈ ಜನರು ದ್ವೇಷದಿಂದ ತುಂಬಿದ್ದಾರೆ ಏಕೆಂದರೆ ಯಾರೂ ಅವರಿಗೆ ಪ್ರೀತಿಯನ್ನು ನೀಡುವುದಿಲ್ಲ. ಅವರನ್ನು ಕ್ಷಮಿಸಿ. ತಂಡವನ್ನು ರಕ್ಷಿಸಿ” ಎಂದು ರಾಹುಲ್ ಗಾಂಧಿ ಮಂಗಳವಾರ ಸಂಜೆ ಟ್ವೀಟ್ ಮಾಡಿದ್ದಾರೆ. ಇವತ್ತು ಬೆಳಗ್ಗೆ ದೆಹಲಿ ಮಹಿಳಾ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ಕಳುಹಿಸಿದ್ದು, ಕೊಹ್ಲಿ ಮಗಳ ವಿರುದ್ಧ ಬೆದರಿಕೆಗಳ ತನಿಖೆಯ ಕುರಿತು ಕ್ರಮ ತೆಗೆದುಕೊಳ್ಳಲು ಹೇಳಿದೆ.
ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ ಮಗಳ ವಿರುದ್ಧದ ಬೆದರಿಕೆಗಳು “ತುಂಬಾ ನಾಚಿಕೆಗೇಡಿನವು” ಎಂದು ಡಿಸಿಡಬ್ಲ್ಯೂ ಅಧ್ಯಕ್ಷರು ಹೇಳಿದ್ದು ಬೆದರಿಕೆ ಹಾಕುತ್ತಿರುವವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
“ತಂಡವು ನಮಗೆ ಸಾವಿರಾರು ಬಾರಿ ಹೆಮ್ಮೆ ತಂದಿದೆ, ಸೋಲಿನಲ್ಲಿ ಏಕೆ ಈ ಮೂರ್ಖತನ?” ಎಂದು ಪ್ರಶ್ನಿಸಿದ ಡಿಸಿಡಬ್ಲ್ಯು ಈ ಬಗ್ಗೆ ತನಿಖೆ ಮತ್ತು ಬಂಧನಗಳ ಮಾಹಿತಿ ಕೇಳಿದೆ.
PublicNext
02/11/2021 07:28 pm