ದುಬೈ: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಸ್ಕಾಟ್ಲೆಂಡ್ ನಾಯಕ ಕೈಲ್ ಕೋಟ್ಜರ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ಸ್ಕಾಟ್ಲೆಂಡ್ ವಿರುದ್ಧ ಸೆಣಸಲಿದೆ. ಕಿವೀಸ್ ಸೂಪರ್-12ರ ಹಂತದಲ್ಲಿ 2 ಪಂದ್ಯಗಳನ್ನು ಆಡಿ ಒಂದರಲ್ಲಿ ಗೆದ್ದು ಗುಂಪು 2ರಲ್ಲಿ 3ನೇ ಸ್ಥಾನದಲ್ಲಿದ್ದರೆ, ಸ್ಕಾಟ್ಲೆಂಡ್ ಕೊನೆಯ ಸ್ಥಾನದಲ್ಲಿದೆ.
ತಂಡಗಳು ಹೀಗಿವೆ:
ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ) , ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಜೇಮ್ಸ್ ನೀಶಮ್, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್.
ಸ್ಕಾಟ್ಲೆಂಡ್: ಜಾರ್ಜ್ ಮುನ್ಸಿ, ಕೈಲ್ ಕೋಟ್ಜರ್ (ನಾಯಕ), ಮ್ಯಾಥ್ಯೂ ಕ್ರಾಸ್ (ವಿಕೆಟ್ ಕೀಪರ್), ರಿಚಿ ಬೆರಿಂಗ್ಟನ್, ಕ್ಯಾಲಮ್ ಮ್ಯಾಕ್ಲಿಯೋಡ್, ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಸಫ್ಯಾನ್ ಷರೀಫ್, ಬ್ರಾಡ್ಲಿ ವೀಲ್, ಅಲಾಸ್ಡೇರ್ ಇವಾನ್ಸ್.
PublicNext
03/11/2021 03:28 pm