ಅಬುಧಾಬಿ: ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನವು ಬೌಲಿಂಗ್ ಆಯ್ದುಕೊಂಡಿದೆ.
ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ಅಬುಧಾಬಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 33ನೇ ಪಂದ್ಯವು ಸೆಮಿಫೈನಲ್ ಪ್ರವೇಶದ ಕನಸು ಕಾಣುತ್ತಿರುವ ಭಾರತಕ್ಕೆ ಮಹತ್ವದ್ದಾಗಿದೆ. ಕಳೆದ ಎರಡು ಪಂದ್ಯಗಳಲ್ಲಿ ಸತತ ಸೋಲು ಕಂಡಿರುವ ಭಾರತವು ಇಂದು ಗೆಲುವಿನ ಖಾತೆ ತೆರೆಯುತ್ತಾ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.
ತಂಡಗಳು ಹೀಗಿವೆ:
ಭಾರತ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಆರ್. ಅಶ್ವಿನ್, ಜಸ್‌ಪ್ರೀತ್ ಬುಮ್ರಾ.
ಅಫ್ಘಾನಿಸ್ತಾನ: ಹಜರತುಲ್ಲಾ ಝಜೈ, ಮೊಹಮ್ಮದ್ ಶಹಜಾದ್ (ವಿಕೆಟ್ ಕೀಪರ್), ರಹಮಾನುಲ್ಲಾ ಗುರ್ಬಾಜ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ಶರಫುದ್ದೀನ್ ಅಶ್ರಫ್, ಗುಲ್ಬದಿನ್ ನೈಬ್, ರಶೀದ್ ಖಾನ್, ಕರೀಮ್ ಜನತ್, ನವೀನ್ ಉಲ್ ಹಕ್, ಹಮೀದ್ ಹಸನ್.
PublicNext
03/11/2021 07:23 pm