ಶಾರ್ಜಾ: ಟಿಮ್ ಸೌಥಿ ಹಾಗೂ ಟ್ರೆಂಟ್ ಬೌಲ್ಟ್ ಉತ್ತಮ ಬೌಲಿಂಗ್ ಪ್ರದರ್ಶನದಿಂದ ನ್ಯೂಜಿಲೆಂಡ್ ತಂಡವು ನಮೀಬಿಯಾ ವಿರುದ್ಧ 52 ರನ್‌ಗಳಿಂದ ಗೆದ್ದು ಬೀಗಿದೆ.
ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 36ನೇ ಪಂದ್ಯದಲ್ಲಿ ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ದುಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ತಂಡವು 4 ವಿಕೆಟ್ ನಷ್ಟಕ್ಕೆ 163 ಗಳಿಸಿತ್ತು. 164 ರನ್‌ಗಳ ಗುರಿ ಬೆನ್ನತ್ತಿದ ನಮೀಬಿಯಾ 7 ವಿಕೆಟ್ ನಷ್ಟಕ್ಕೆ ಕೇವಲ 111 ರನ್ ಗಳಿಸಿ ಸೋಲು ಕಂಡಿದೆ. ನಮೀಬಿಯಾ ಪರ ಸ್ಟೀಫನ್ ಬಾರ್ಡ್ 21 ರನ್, ಕ್ರೇಗ್ ವಿಲಿಯಮ್ಸ್ 25 ರನ್ ಹಾಗೂ ಜೇನ್ ಗ್ರೀನ್ 23 ರನ್ ಗಳಿಸಿದರು. ಉಳಿದ ಎಲ್ಲ ಆಟಗಾರರು ಬ್ಯಾಟಿಂಗ್ ವೈಫಲ್ಯ ತೋರಿದರು.
ಇನ್ನು ಕಿವೀಸ್ ಪರ ಟಿಮ್ ಸೌಥಿ ಹಾಗೂ ಟ್ರೆಂಟ್ ಬೌಲ್ಟ್ ತಲಾ ಎರಡು ವಿಕೆಟ್ ಕಿತ್ತು ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಇನ್ನು ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್ ಹಾಗೂ ಇಶ್ ಸೋಧಿ ತಲಾ ಒಂದು ವಿಕೆಟ್ ಉರುಳಿಸಿದರು.
PublicNext
05/11/2021 06:55 pm