ದುಬೈ: ಸ್ಕಾಟ್ಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾ ನಾಯಕ, ಬರ್ತ್ ಡೇ ಬಾಯ್ ವಿರಾಟ್ ಕೊಹ್ಲಿ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯವು ಭಾರತ ಪಾಲಿಗೆ ಅಂತ್ಯಂತ ಮಹತ್ವದ್ದಾಗಿದೆ. ವಿರಾಟ್ ಕೊಹ್ಲಿ ಅವರು ಇಂದು 33ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬದ ದಿನದಂದು ಅಭಿಮಾನಿಗಳಿಗೆ ಗೆಲುವಿನ ಸಿಹಿ ಹಂಚುವ ನಿರೀಕ್ಷೆ ಮೂಡಿಸಿದ್ದಾರೆ.
ತಂಡಗಳು ಹೀಗಿವೆ:
ಭಾರತ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್‌ಕೀಪರ್), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬೂಮ್ರಾ, ಆರ್. ಅಶ್ವಿನ್, ವರುಣ್ ಚಕ್ರವರ್ತಿ.
ಸ್ಕಾಟ್ಲೆಂಡ್: ಜಾರ್ಜ್ ಮುನ್ಸೆ, ಕೈಲ್ ಕೋಟ್ಜರ್ (ನಾಯಕ), ಮ್ಯಾಥ್ಯೂ ಕ್ರಾಸ್, ರಿಚಿ ಬೆರಿಂಗ್ಟನ್, ಕ್ಯಾಲಮ್ ಮ್ಯಾಕ್ಲಿಯೋಡ್, ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಸಫ್ಯಾನ್ ಷರೀಫ್, ಬ್ರಾಡ್ಲಿ ವೀಲ್, ಅಲಾಸ್ಡೇರ್ ಇವಾನ್ಸೆರ್.
PublicNext
05/11/2021 07:21 pm