ಶಾರ್ಜಾ: ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಹಾಗೂ ಐಡೆನ್ ಮಾರ್ಕ್ರಾಮ್ ಅಬ್ಬರದ ಅರ್ಧಶತಕದಿಂದ ದಕ್ಷಿಣ ಆಫ್ರಿಕಾ ತಂಡವು ಇಂಗ್ಲೆಂಡ್‌ಗೆ 190 ರನ್‌ಗಳ ಗುರಿ ನೀಡಿದೆ.
ಟಿ20 ವಿಶ್ವಕಪ್ ಟೂರ್ನಿಯ 39ನೇ ಪಂದ್ಯದಲ್ಲಿ ಇಂದು ಹಾಲಿ ಏಕದಿನ ವಿಶ್ವಕಪ್ ಚಾಂಪಿಯನ್ಸ್ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಣಸಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 2 ವಿಕೆಟ್ ನಷ್ಟಕ್ಕೆ 189 ರನ್ ಚಚ್ಚಿದೆ.
ಹರಿಣಗಳ ಪರ ಕ್ವಿಂಟನ್ ಡಿ ಕಾಕ್ 32 ರನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅಜೇಯ 94 ರನ್ ಹಾಗೂ ಐಡೆನ್ ಮಾರ್ಕ್ರಾಮ್ ಅಜೇಯ 52 ರನ್ ಗಳಿಸಿದರು.
PublicNext
06/11/2021 09:52 pm