ದುಬೈ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್‌ನಿಂದ ಟೀಂ ಇಂಡಿಯಾ ಹೊರಬಿದ್ದಿದೆ.
ಅಬುಧಾಬಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಅಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಪಂದ್ಯದಲ್ಲಿ ಕಿವೀಸ್ ಪಡೆ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಸೆಮೀಸ್ ತಲುಪಿದೆ. ಇತ್ತ ಅಫ್ಘಾನಿಸ್ತಾನದೊಂದಿಗೆ ಕೊಹ್ಲಿ ಬಾಯ್ಸ್ ಕೂಡ ತವರಿಗೆ ಮರಳೋದು ಕನ್ಫರ್ಮ್ ಆಗಿದೆ.
ಅಫ್ಘಾನ್ ವಿರುದ್ಧ ನ್ಯೂಜಿಲೆಂಡ್ ಜಯ ಗಳಿಸಿದ್ದಂತೆ ಟೀಂ ಇಂಡಿಯಾ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳ ಅಭಿಷೇಕವಾಗುತ್ತಿದೆ. ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ ಭಾರತ ಭಾಗವಹಿಸಿದ್ದ ಕೊನೆಯ ಟಿ20 ವಿಶ್ವಕಪ್ ಟೂರ್ನಿ ಇದಾಗಿತ್ತು. ಈ ಹಿಂದೆಯೇ ವಿಶ್ವಕಪ್ ಬಳಿಕ ಟಿ20 ನಾಯಕತ್ವವನ್ನು ತೊರೆಯುವುದಾಗಿ ಕೊಹ್ಲಿ ಘೋಷಿಸಿದ್ದರು. ಹಾಗಾಗಿ ಸೋಮವಾರ ನಮೀಬಿಯಾ ವಿರುದ್ಧ ನಡೆಯಲಿರುವ ಪಂದ್ಯವು ವಿರಾಟ್ ಕಪ್ತಾನಗಿರಿಯಲ್ಲಿ ಭಾರತದ ಪಾಲಿಗೆ ಕೊನೆಯ ಪಂದ್ಯವಾಗಿದೆ.
PublicNext
07/11/2021 08:30 pm