ದುಬೈ: ಐಸಿಸಿ ನೂತನ ಟಿ20 ಬ್ಯಾಟರ್ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ನಾಲ್ಕು ಸ್ಥಾನ ಕುಸಿತ ಕಂಡಿದ್ದು, ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ. ಇದೇ ವೇಳೆ ಕೆ.ಎಲ್ ರಾಹುಲ್ ಮೂರು ಸ್ಥಾನ ಜಿಗಿದು ಐದನೇ ಸ್ಥಾನಕ್ಕೆ ತಲುಪಿದ್ದಾರೆ.
ಪಾಕಿಸ್ತಾನ್ ನಾಯಕ ಬಾಬರ್ ಆಜಂ ಅಗ್ರಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ಬ್ಯಾಟರ್ ಡೇವಿಡ್ ಮಲಾನ್ ಎರಡನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಮ್ ಈಗ ಮೂರನೇ ಸ್ಥಾನಕ್ಕೆ ಏರಿದ್ದಾರೆ. ದಕ್ಷಿಣ ಆಫ್ರಿಕಾದ ಮತ್ತೊಬ್ಬ ಬ್ಯಾಟರ್ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಆರು ಸ್ಥಾನಗಳನ್ನು ಜಿಗಿದಿದ್ದಾರೆ. ಇದರೊಂದಿಗೆ 10ನೇ ಸ್ಥಾನ ಪಡೆದುಕೊಂಡಿದ್ದಾರೆ.
PublicNext
10/11/2021 04:02 pm