ಅಬುಧಾಬಿ: ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಅಬುಧಾಬಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯವು ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡವು ಫೈನಲ್‌ಗೆ ಎಂಟ್ರಿ ಕೊಡಲಿದೆ.
ತಂಡಗಳು ಹೀಗಿವೆ:
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ವಿಕೆಟ್ ಕೀಪರ್), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಮಾರ್ಕ್ ವುಡ್.
ನ್ಯೂಜಿಲೆಂಡ್ ತಂಡ: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್.
PublicNext
10/11/2021 07:21 pm