ನವದೆಹಲಿ: 'ನನ್ನ ಹಾಗೂ ನನ್ನ ಕುಟುಂಬದ ಮೇಲೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ. ನಾವು ಸುರಕ್ಷಿತವಾಗಿದ್ದೇವೆ’. ಎಂದು ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾ ಬುಧವಾರ ಸ್ಪಷ್ಟನೆ ನೀಡಿದ್ದಾರೆ.
ಹರಿಯಾಣದ ಸೋನೆಪತ್‌ನ ಹಲಾಲ್‌ಪುರದಲ್ಲಿರುವ ಸುಶೀಲ್ ಕುಮಾರ್ ರೆಸ್ಲಿಂಗ್ ಅಕಾಡೆಮಿ ಬಳಿ ನಿಶಾ ದಹಿಯಾ ಹಾಗೂ ಸಹೋದರನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಮಾಧ್ಯಮ ವರದಿಗಳನ್ನು ಗಮನಿಸಿದ ಬಳಿಕ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ನಿಶಾ ದಹಿಯಾ ಅವರು, "ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ಸುಳ್ಳು. ನನ್ನ ಮೇಲೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ. ನಾನು ಮತ್ತು ನನ್ನ ಕುಟುಂಬ ಸುರಕ್ಷಿತವಾಗಿದೆ" ಎಂದು ಹೇಳಿದ್ದಾರೆ.
PublicNext
10/11/2021 07:50 pm