ಅಬುಧಾಬಿ: ಡೇರಿಲ್ ಮಿಚೆಲ್ ಸ್ಫೋಟಕ ಅರ್ಧಶತಕ ಹಾಗೂ ಡೆವೊನ್ ಕಾನ್ವೇ ಸಮಯೋಚಿತ ಬ್ಯಾಟಿಂಗ್ ಸಹಾಯದಿಂದ ನ್ಯೂಜಿಲೆಂಡ್ ತಂಡವು ಇಂಗ್ಲೆಂಡ್ ವಿರುದ್ಧ 5 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಇದರೊಂದಿಗೆ ಕಿವೀಸ್ ಪಡೆ ಫೈನಲ್ ಪಂದ್ಯಕ್ಕೆ ಎಂಟ್ರಿ ಕೊಟ್ಟಿದೆ.
ಅಬುಧಾಬಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಫೀಲ್ಡಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು 4 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡವು 6 ಎಸೆತಗಳು ಬಾಕಿ ಇರುವಂತೆ 5 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿ ಗೆದ್ದು ಬೀಗಿದೆ. ಕಿವೀಸ್ ಪರ ಡೇರಿಲ್ ಮಿಚೆಲ್ ಅಜೇಯ 72 ರನ್, ಡೆವೊನ್ ಕಾನ್ವೇ 46 ರನ್, ಜಿಮ್ಮಿ ನೀಶಮ್ 26 ರನ್ ಗಳಿಸಿದರು.
ಇದಕ್ಕೂ ಮುನ್ನ ಇಂಗ್ಲೆಂಡ್ ಪರ ಮೊಯಿನ್ ಅಲಿ ಅಜೇಯ 51 ರನ್, ಡೇವಿಡ್ ಮಲನ್ 41 ರನ್ ಗಳಿಸಿದ್ದರು. ಟಿಮ್ ಸೌಥಿ, ಆಡಮ್ ಮಿಲ್ನೆ, ಇಶ್ ಸೋಧಿ ಹಾಗೂ ಜಿಮ್ಮಿ ನೀಶಮ್ ತಲಾ ಒಂದು ವಿಕೆಟ್ ಪಡೆದುಕೊಂಡಿದ್ದರು.
PublicNext
10/11/2021 11:10 pm