ಹೊಸದಿಲ್ಲಿ: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಅಭಿಯಾನ ಅಂತ್ಯಗೊಂಡಿದೆ. ನವೆಂಬರ್ ಅಂತ್ಯಕ್ಕೆ ನ್ಯೂಜಿಲೆಂಡ್ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಆರಂಭಗೊಳ್ಳಿದೆ. ಕಿವೀಸ್ ವಿರುದ್ಧ ಟೆಸ್ಟ್ ಸರಣಿಯಿಂದ ಅನುಭವಿ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರಿಗೆ ರೆಸ್ಟ್ ನೀಡಿರುವ ಹಿನ್ನೆಲೆಯಲ್ಲಿ ರಹಾನೆಗೆ ಕ್ಯಾಪ್ಟನ್ ಜವಾಬ್ದಾರಿ ನಿಭಾಯಿಸಲಿದ್ದಾರೆ.
ಹೌದು ಅನುಭವಿ ಬ್ಯಾಟ್ಸ್ ಮನ್ ಅಜಿಂಕ್ಯ ರಹಾನೆ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಸಾರಥ್ಯ ವಹಿಸಿಕೊಳ್ಳಲಿದ್ದಾರೆ. ಟೆಸ್ಟ್ ಸರಣಿಗೂ ಮುನ್ನ ಕಿವೀಸ್ ವಿರುದ್ಧ ಮೂರು ಪಂದ್ಯಗಳ ಟಿ20 ಕ್ರಿಕೆಟ್ ಸರಣಿ ನಡೆಯಲಿದ್ದು, ಅನುಭವಿ ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಭಾರತ ಟಿ20 ತಂಡದ ನೂತನ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.
ಈ ನಡುವೆ ರೋಹಿತ್ ಅವರಿಗೆ ಕಿವೀಸ್ ವಿರುದ್ಧದ ಎರಡೂ ಟೆಸ್ಟ್ ಪಂದ್ಯಗಳಿಂದ ವಿಶ್ರಾಂತಿ ನೀಡಲಾಗಿದೆ ಎಂದು ವರದಿಗಳು ಹೇಳಿವೆ. ಆಟಗಾರರ ಮೇಲಿನ ಹೊರೆ ನಿರ್ವಹಣೆ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಎಂದಿನ ನಾಯಕ ವಿರಾಟ್ ಕೊಹ್ಲಿ ಕೂಡ ವಿಶ್ರಾಂತಿ ತೆಗೆದುಕೊಂಡಿದ್ದಾರೆ. ವಿರಾಟ್ ಮತ್ತು ರೋಹಿತ್ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ಕಾನ್ಪುರ ಟೆಸ್ಟ್ನಲ್ಲಿ ತಂಡದ ನಾಯಕತ್ವ ನಿಭಾಯಿಸಲಿದ್ದು, ಮುಂಬೈನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿ ನಾಯಕತ್ವ ತೆಗೆದುಕೊಳ್ಳಲಿದ್ದಾರೆ.
PublicNext
11/11/2021 09:15 pm