ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ನಡೆದ ಎರಡನೇ ಸೆಮಿಪೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್ ಗಳ ರೋಚಕ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ ಫೈನಲ್ ಗೆಎಂಟ್ರಿ ಕೊಟ್ಟಿದೆ.
ಇಂಗ್ಲೆಂಡ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ತಲುಪಿರುವ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ಸೆಣಸಲಿದೆ. ನವೆಂಬರ್ 14 ಭಾನುವಾರದಂದು ದುಬೈ ಅಂತಾರಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.
ವಿಶ್ವಕಪ್ ನ 44ನೇ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 177 ರನ್ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಮೊದಲ ವೋವರ್ ನಲ್ಲೇ ಅಘಾತಕ್ಕೊಳಗಾದರೂ ನಂತರ ಚೇತರಿಸಿಕೊಂಡ ಆಸೀಸ್ ಪಾಕಿಸ್ತಾನದ ವಿರುದ್ದ 5 ವಿಕೆಟ್ ಜಯ ಸಾಧಿಸಿದೆ.
PublicNext
12/11/2021 12:21 am