ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ರಾಷ್ಟ್ರಪತಿ ಭವನದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿ ಮತ್ತು ದ್ರೋಣಾಚಾರ್ಯ ಪ್ರಶಸ್ತಿಗಳನ್ನು ಕ್ರೀಡಾ ಲೋಕದ ಸಾಧಕರಿಗೆ ಪ್ರದಾನ ಮಾಡಿದರು.
2021ರ ಟೋಕಿಯೊ ಒಲಿಂಪಿಕ್ಸ್ ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರಿಗೆ ಖೇಲ್ ರತ್ನ ಪ್ರಶಸ್ತಿ ನೀಡಲಾಗಿದೆ. ಇದಲ್ಲದೆ, ಪುರುಷ ಕುಸ್ತಿಪಟು ರವಿ ದಹಿಯಾ, ಮಹಿಳಾ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್, ಹಾಕಿ ತಂಡದ ಗೋಲ್‌ಕೀಪರ್ ಪಿಆರ್ ಶ್ರೀಜೇಶ್, ಪ್ಯಾರಾಲಿಂಪಿಕ್ ಪದಕ ವಿಜೇತ ಶೂಟರ್ ಅವನಿ ಲೆಖರಾ, ಪ್ಯಾರಾಥ್ಲೀಟ್ ಸುಮಿತ್ ಆಂಟಿಲ್, ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್ ಭಗತ್, ಕೃಷ್ಣ ನಗರ, ಪ್ಯಾರಾ ಶೂಟರ್ ಮನೀಶ್ ನರ್ವಾಲ್ ಹೆಸರುಗಳು ಸೇರಿವೆ. ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ಫುಟ್‌ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಅವರಿಗೂ ಖೇಲ್ ರತ್ನ ಪ್ರಶಸ್ತಿ ನೀಡಲಾಯಿತು.
PublicNext
13/11/2021 08:08 pm