ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ವಿವಿಎಸ್ ಲಕ್ಷ್ಮಣ್ ಅವರಿಗೆ ಬಿಸಿಸಿಐ ಹೊಸ ಜವಾಬ್ದಾರಿ ವಹಿಸಲು ನಿರ್ಧರಿಸಿದೆ.
ಭಾರತದ ಮಾಜಿ ಕ್ರಿಕೆಟರ್ ರಾಹುಲ್ ದ್ರಾವಿಡ್ ಅವರು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಲಿಯಾದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ(ಎನ್‌ಸಿಎ) ನೂತನ ಮುಖ್ಯಸ್ಥರನ್ನಾಗಿ ವಿವಿಎಸ್ ಲಕ್ಷ್ಮಣ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯ ಮುಖ್ಯಸ್ಥರಾಗಿ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಮಾಜಿ ಬ್ಯಾಟರ್ ವಿವಿಎಸ್ ಲಕ್ಷ್ಮಣ್ ಅವರನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ನೂತನ ಮುಖ್ಯಸ್ಥರನ್ನಾಗಿ ಮಾಡಲಾಗಿದೆ. ರಾಹುಲ್ ದ್ರಾವಿಡ್ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಈಗ ಲಕ್ಷ್ಮಣ್ ಅವರನ್ನ ನೇಮಕ ಮಾಡಲಾಗಿದೆ. ಹಿಂದೆ ಲಕ್ಷ್ಮಣ್ ಈ ಹುದ್ದೆಯನ್ನು ಅಲಂಕರಿಸಲು ನಿರಾಕರಿಸಿದ್ದರು. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಮನವೊಲಿಸಿದ ನಂತರ ಅವರು ಒಪ್ಪಿಕೊಂಡಿದ್ದಾರೆ. ಭಾರತ ಎ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಲಿದೆ. ಪ್ರವಾಸದ ಬಳಿಕ ಲಕ್ಷ್ಮಣ್ ಈ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಕ್ರಿಕೆಟ್ ಅಂಗಳದ ‘ವೆರಿ ವೆರಿ ಸ್ಪೆಷಲ್’ ಬ್ಯಾಟರ್ ಎಂದು ಕರೆಯಲ್ಪಡುವ ಲಕ್ಷ್ಮಣ್ ತಮ್ಮ ವೃತ್ತಿಜೀವನದಲ್ಲಿ 134 ಟೆಸ್ಟ್ ಮತ್ತು 86 ಏಕದಿನ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ನಲ್ಲಿ 17 ಶತಕ ಮತ್ತು 56 ಅರ್ಧ ಶತಕಗಳೊಂದಿಗೆ ಒಟ್ಟು 8781 ರನ್ ಗಳಿಸಿದ್ದಾರೆ. ಇದಲ್ಲದೇ ಏಕದಿನದಲ್ಲಿ 6 ಶತಕ ಹಾಗೂ 10 ಅರ್ಧ ಶತಕ ಸಿಡಿಸಿ ಒಟ್ಟು 2338 ರನ್ ಗಳಿಸಿದ್ದಾರೆ. ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 55 ಶತಕಗಳನ್ನು ಒಳಗೊಂಡಂತೆ 19,730 ರನ್‌ಗಳನ್ನು ಕಲೆಹಾಕಿದ್ದಾರೆ.
PublicNext
14/11/2021 04:31 pm