ದುಬೈ: ನಾಯಕ ಕೇನ್ ವಿಲಿಯಮ್ಸನ್ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ನ್ಯೂಜಿಲೆಂಡ್ ತಂಡವು ಆಸ್ಟ್ರೇಲಿಯಾ ತಂಡಕ್ಕೆ 173 ರನ್‌ಗಳ ಗುರಿ ನೀಡಿದೆ.
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆರನ್ ಫಿಂಚ್ ಫೀಲ್ಡಿಂಡ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ಪಡೆ 4 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿದೆ.
ನ್ಯೂಜಿಲೆಂಡ್ ಪರ ನಾಯಕ ಕೇನ್ ವಿಲಿಯಮ್ಸನ್ 85 ರನ್ (48 ಎಸೆತ, 10 ಬೌಂಡರಿ, 3 ಸಿಕ್ಸ್) ಸಿಡಿಸಿದರು. ಉಳಿದಂತೆ ಮಾರ್ಟಿನ್ ಗಪ್ಟಿಲ್ 28 ರನ್, ಗ್ಲೆನ್ ಫಿಲಿಪ್ಸ್ 18 ರನ್, ಡೇರಿಲ್ ಮಿಚೆಲ್ 11 ರನ್, ಜೇಮ್ಸ್ ನೀಶಮ್ ಅಜೇಯ 13 ರನ್ ಹಾಗೂ ಟಿಮ್ ಸೀಫರ್ಟ್ ಅಜೇಯ 8 ರನ್ ಗಳಿಸಿದರು.
ಇನ್ನು ಆಸ್ಟ್ರೇಲಿಯಾ ಪರ ಜೋಶ್ ಹ್ಯಾಜಲ್‌ವುಡ್ ಮಿಂಚಿನ ಬೌಲಿಂಗ್ ಪ್ರದರ್ಶನ ನೀಡಿದರು. ಅವರು 4 ಓವರ್ ಬೌಲಿಂಗ್ ಮಾಡಿ ಕೇವಲ 16 ರನ್ ನೀಡಿ ಪ್ರಮುಖ 3 ವಿಕೆಟ್ ಉರುಳಿಸಿದರು. ಆಡಮ್ ಜಂಪಾ ಕೂಡ 1 ವಿಕೆಟ್ ಪಡೆದು ತಂಡಕ್ಕೆ ಆಸರೆಯಾದರು.
PublicNext
14/11/2021 09:14 pm