ದುಬೈ: ನ್ಯೂಜಿಲೆಂಡ್ ವಿರುದ್ಧ ಭಾನುವಾರ ನಡೆದ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಕಿವೀಸ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಭರ್ಜರಿ ಬ್ಯಾಟಿಂಗ್ ನಡೆಸುವ ಮೂಲಕ ವಿಶೇಷ ದಾಖಲೆಗಳನ್ನು ಬರೆದಿದ್ದಾರೆ. ಆದರೆ ಇದೇ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ದಾಖಲೆಯನ್ನು ಆಸ್ಟ್ರೇಲಿಯಾದ ಮಿಚೆಲ್ ಮಾರ್ಷ್ ಮುರಿದಿದ್ದು ವಿಶೇಷವಾಗಿದೆ.
ಕೇನ್ ವಿಲಿಯಮ್ಸನ್ 32 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ನ್ಯೂಜಿಲೆಂಡ್ ತಂಡವನ್ನು ಆಪತ್ತಿನಿಂದ ಮೇಲೆತ್ತಿದರು. ಇದು ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್‌ನಲ್ಲಿ ದಾಖಲಾದ ಅತಿ ವೇಗದ ಅರ್ಧಶತಕವಾಗಿತ್ತು. ಬಳಿಕ ರನ್ ಚೇಸ್ ಮಾಡಿದ್ದ ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ 31 ಎಸೆತದಲ್ಲಿ ಫಿಫ್ಟಿ ಸಿಡಿಸಿ ವಿಲಿಯಮ್ಸನ್ ದಾಖಲೆ ಮುರಿದರು.
PublicNext
15/11/2021 08:23 am