ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಅವರು ಟಿ20 ವಿಶ್ವಕಪ್ ವಿಜಯವನ್ನು ಆಚರಿಸುವ ಆಸ್ಟ್ರೇಲಿಯಾದ ವಿಧಾನವನ್ನು "ಸ್ವಲ್ಪ ಅಸಹ್ಯಕರ" ಎಂದು ಬಣ್ಣಿಸಿದ್ದಾರೆ.
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನವೆಂಬರ್ 14ರಂದು ನಡೆದ ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವು ನ್ಯೂಜಿಲೆಂಡ್ ವಿರುದ್ಧ ಎಂಟು ವಿಕೆಟ್‌ಗಳಿಂದ ಗೆದ್ದು, ತನ್ನ ಚೊಚ್ಚಲ ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಟ್ಟಿತ್ತು. ಡ್ರೇಸಿಂಗ್ ರೂಮ್‌ನಲ್ಲಿ ಆಸೀಸ್ ಆಟಗಾರರ ಸಂಭ್ರಮದ ವಿಡಿಯೋ ಭಾರೀ ವೈರಲ್ ಆಗಿದೆ. ಈ ಬಗ್ಗೆ ಪಾಕಿಸ್ತಾನ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಪ್ರತಿಕ್ರಿಯೆ ನೀಡಿದ್ದಾರೆ.
ಆಸ್ಟ್ರೇಲಿಯಾದ ಡ್ರೆಸ್ಸಿಂಗ್ ರೂಂ ವಿಡಿಯೋವನ್ನು ಟ್ವೀಟ್ ಮಾಡಿರುವ ಅಖ್ತರ್, "ಸ್ವಲ್ಪ ಅಸಹ್ಯ ಹುಟ್ಟಿಸುವ ವಿಧಾನ ಇದಲ್ಲವೇ? ಎಂದು ಟಾಂಗ್ ಕೊಟ್ಟಿದ್ದಾರೆ.
PublicNext
16/11/2021 10:20 am