ಜೈಪುರ್: ಈ ಬಾರಿಯ ಐಪಿಎಲ್ನ ದುಬೈ ಆವೃತ್ತಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಜೊತೆಗೆ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿ ಮಿಂಚಿದ್ದ ಪ್ರತಿಭೆ ವೆಂಕಟೇಶ್ ಅಯ್ಯರ್ ಟೀಂ ಇಂಡಿಯಾ ಪರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಇಂದು ಪಾದಾರ್ಪಣೆ ಮಾಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದ ಮೂಲಕ ವೆಂಕಟೇಶ್ ಅಯ್ಯರ್ ಭಾರತ ಟಿ20 ತಂಡಕ್ಕೆ ಸ್ಥಾನ ಪಡೆದಿದ್ದಾರೆ. ಅವರಿಗೆ ನಾಯಕ ರೋಹಿತ್ ಶರ್ಮಾ ಕ್ಯಾಪ್ ನೀಡಿ ತಂಡಕ್ಕೆ ಸ್ವಾಗತ ಕೋರಿದರು.
PublicNext
17/11/2021 07:27 pm