ಜೈಪುರ್: ಮಾರ್ಕ್ ಚಾಪ್ಮನ್ ಹಾಗೂ ಮಾರ್ಟಿನ್ ಗಪ್ಟಿಲ್ ಅರ್ಧಶತಕದಿಂದ ನ್ಯೂಜಿಲೆಂಡ್ ತಂಡವು ಟೀಂ ಇಂಡಿಯಾಗೆ 165 ರನ್‌ಗಳ ಗುರಿ ನೀಡಿದೆ.
ಜೈಪುರದ ಸವಾಯ್ ಮಾನಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ಪಡೆ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು.
ನ್ಯೂಜಿಲೆಂಡ್ ಪರ ಮಾರ್ಕ್ ಚಾಪ್ಮನ್ 63 ರನ್, ಮಾರ್ಟಿನ್ ಗಪ್ಟಿಲ್ 70 ರನ್ ಗಳಿಸಿದರು. ಉಳಿದಂತೆ ಯಾವುದೇ ಆಟಗಾರರು 20 ರನ್‌ಗಳ ಗಡಿ ದಾಟಲಿಲ್ಲ.
ಭಾರತದ ಪರ ಅನುಭವಿ ಬೌಲರ್ ಗಳಾದ ಆರ್. ಅಶ್ವಿನ್ ಹಾಗೂ ಭುವನೇಶ್ವರ್ ಕುಮಾರ್ ತಲಾ ಎರಡು ವಿಕೆಟ್ ಪಡೆದರು. ಇನ್ನು ಯುವ ಬೌಲರ್ ಗಳಾದ ದೀಪಕ್ ಚಾಹರ್ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದು ವಿಕೆಟ್ ಉರುಳಿಸಿದರು.
PublicNext
17/11/2021 08:53 pm