ಜೈಪುರ್: ಸೂರ್ಯಕುಮಾರ್ ಯಾದವ್ ಅರ್ಧಶತಕ, ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ಸಹಾಯದಿಂದ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿದೆ.
ಜೈಪುರದ ಸವಾಯ್ ಮಾನಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ಪಡೆ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತ್ತು.
ಟಾರ್ಗೆಟ್ ಬೆನ್ನತ್ತಿದ ಭಾರತ ತಂಡವು 2 ಎಸೆತಗಳು ಬಾಕಿ ಇರುವಂತೆ 5 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿ ಗೆಲುವು ಸಾಧಿಸಿದೆ. ಟೀಂ ಇಂಡಿಯಾ ಪರ ಸೂರ್ಯಕುಮಾರ್ ಕುಮಾರ್ ಯಾದವ್ 62 ರನ್, ನಾಯಕ ರೋಹಿತ್ ಶರ್ಮಾ 48 ರನ್, ಕೆ.ಎಲ್.ರಾಹುಲ್ 15 ರನ್, ರಿಷಭ್ ಪಂತ್ ಅಜೇಯ 17 ರನ್ ಗಳಿಸಿದರು.
ಇದಕ್ಕೂ ಮುನ್ನ ನ್ಯೂಜಿಲೆಂಡ್ ಪರ ಮಾರ್ಕ್ ಚಾಪ್ಮನ್ 63 ರನ್, ಮಾರ್ಟಿನ್ ಗಪ್ಟಿಲ್ 70 ರನ್ ಗಳಿಸಿದ್ದರು. ಉಳಿದಂತೆ ಯಾವುದೇ ಆಟಗಾರರು 20 ರನ್‌ಗಳ ಗಡಿ ದಾಟಲಿಲ್ಲ.
ಭಾರತದ ಪರ ಅನುಭವಿ ಬೌಲರ್ ಗಳಾದ ಆರ್. ಅಶ್ವಿನ್ ಹಾಗೂ ಭುವನೇಶ್ವರ್ ಕುಮಾರ್ ತಲಾ ಎರಡು ವಿಕೆಟ್ ಪಡೆದಿದ್ದರು. ಇನ್ನು ಯುವ ಬೌಲರ್ ಗಳಾದ ದೀಪಕ್ ಚಾಹರ್ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದು ವಿಕೆಟ್ ಉರುಳಿಸಿದ್ದರು.
PublicNext
17/11/2021 10:44 pm