ರಾಂಚಿ: ಜೈಪುರದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಗೆಲುವಿನ ಶುಭಾರಂಭ ಮಾಡಿದ್ದ ಭಾರತ ತಂಡವು ಇಂದು ನ್ಯೂಜಿಲೆಂಡ್ ವಿರುದ್ಧ 2ನೇ ಪಂದ್ಯವನ್ನು ಆಡಲು ಸಿದ್ಧವಾಗಿದೆ.
ರಾಂಚಿಯಲ್ಲಿ ಇಂದು ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ. ಇಂದಿನ ಪಂದ್ಯವನ್ನು ಗೆದ್ದು, ರೋಹಿತ್ ಶರ್ಮಾ ನೇತೃತ್ವದ ಪಡೆ ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ. ಅತ್ತ ಸರಣಿ ಜೀವಂತವಾಗಿಟ್ಟುಕೊಳ್ಳಲು ಕಿವೀಸ್, ಹೋರಾಟ ನಡೆಸಲು ಮುಂದಾಗಿದೆ. ಇನ್ನು ಮೂರನೇ ಪಂದ್ಯ ನವೆಂಬರ್ 23ರಂದು ನಡೆಯಲಿದೆ.
PublicNext
19/11/2021 08:05 am