ನವದೆಹಲಿ: ದಕ್ಷಿಣ ಆಫ್ರಿಕಾದ ಸ್ಟಾರ್ ಕ್ರಿಕೆಟರ್, ಆರ್‌ಸಿಬಿ ತಂಡದ ಸ್ಫೋಟಕ ಬ್ಯಾಟರ್ ಎಬಿ ಡಿವಿಲಿಯರ್ಸ್ ಅವರು ಎಲ್ಲ ಮಾದರಿಯ ಕ್ರಿಕೆಟ್‌ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.
ಈ ಬಗ್ಗೆ ಅವರೇ ಸ್ವತಃ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದು, "ಇದೊಂದು ಅದ್ಭುತ ಪ್ರಯಾಣವಾಗಿದೆ. ಆದರೆ ನಾನು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಈವರೆಗೆ ನಾನು ತುಂಬಾ ಖುಷಿಯಿಂದ, ಉತ್ಸಾಹದಿಂದ ಆಟವನ್ನು ಆಡಿದ್ದೇನೆ. ಈಗ ನನಗೆ 37 ವರ್ಷವಾಗಿದೆ. ಹಿಂದಿನ ರೀತಿ ಆಟವಾಡಲು ಸಾಧ್ಯವಾಗದು" ಎಂದು ತಿಳಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಈ ಬಗ್ಗೆ ಟ್ವೀಟ್ ಮಾಡಿದೆ.
ಕ್ರಿಕೆಟ್ ಲೋಕದಲ್ಲಿ ಅಚ್ಚರಿಯ ಬೆಳವಣಿಗೆ ಎಂಬಂತೆ ಮಿ. 360 ಡಿಗ್ರಿ ಖ್ಯಾತಿಯ ಎಬಿ ಡಿವಿಲಿಯರ್ಸ್ ಈ ಹಿಂದೆಯೆ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದರು. ಆದರೆ ಇತರೆ ದೇಶೀಯ ಟೂರ್ನಮೆಂಟ್ಗಳಲ್ಲಿ ಕಣಕ್ಕಿಳಿಯುತ್ತಿದ್ದರು. ಪ್ರಮುಖವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪರವಾಗಿ ಅನೇಕ ವರ್ಷಗಳಿಂದ ಆಡಿದ್ದಾರೆ. ಸದ್ಯ ಇವರು ಇನ್ನುಮುಂದೆ ಯಾವುದೇ ಮಾದರಿಯ ಕ್ರಿಕೆಟ್ನಲ್ಲಿ ಆಡುವುದಿಲ್ಲ ಎಂದು ಹೇಳಿದ್ದಾರೆ.
PublicNext
19/11/2021 01:11 pm