ರಾಂಚಿ: ಕೆ.ಎಲ್. ರಾಹುಲ್ ಹಾಗೂ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಇದರೊಂದಿಗೆ 2-0 ಅಂತರದಿಂದ ಸರಣಿಯನ್ನ ವಶಪಡಿಸಿಕೊಂಡಿದೆ.
ರಾಂಚಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ಪಡೆ 6 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತ್ತು.
ಈ ಟಾರ್ಗೆಟ್ ಬೆನ್ನತ್ತಿದ ಭಾರತ 16 ಎಸೆತಗಳು ಬಾಕಿ ಇರುವಂತೆ 3 ವಿಕೆಟ್ ನಷ್ಟಕ್ಕೆ 155 ರನ್ ಚೆಚ್ಚಿ ಜಯದ ನಗು ಬೀರಿದೆ. ಟೀಂ ಇಂಡಿಯಾ ಪರ ಕನ್ನಡಿಗ ಕೆ.ಎಲ್. ರಾಹುಲ್ 65 ರನ್, ನಾಯಕ ರೋಹಿತ್ ಶರ್ಮಾ 55 ರನ್ ಹಾಗೂ ವೆಂಕಟೇಶ್ ಅಯ್ಯರ್ ಅಜೇಯ 12 ರನ್ ಹಾಗೂ ರಿಷಭ್ ಪಂತ್ ಅಜೇಯ 12 ರನ್ ಗಳಿಸಿದ್ದಾರೆ.
PublicNext
19/11/2021 10:56 pm