ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿವೃತ್ತಿ ಸುಳಿವು ಕೊಟ್ಟ ಧೋನಿ : ನನ್ನ ಕೊನೆಯ ಟಿ20 ಪಂದ್ಯ ಚೆನ್ನೈನಲ್ಲಿ ಆಡುವೆ

ಚೆನ್ನೈ: ಟಿ20 ಕ್ರಿಕೆಟ್ ನ ಸ್ಪೋಟಕ ಬ್ಯಾಟರ್ ಎಬಿ ಡಿವಿಲಿಯರ್ಸ್ ಅವರ ನಿವೃತ್ತಿ ಬೆನ್ನಲ್ಲೇ ಇದೀಗ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಸುಳಿವು ಕೊಟ್ಟಿದ್ದಾರೆ. ಧೋನಿ ಮುಂದಿನ ಸೀಸನ್ ಐಪಿಎಲ್ ಮೂಲಕ ಕ್ರಿಕೆಟ್ ಅಂಗಳಕ್ಕೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಇದೀಗ ಧೋನಿ ನೀಡಿರುವ ಹೇಳಿಕೆಯೊಂದು ಮಹತ್ವ ಪಡೆದುಕೊಂಡಿದೆ.

ಚೆನ್ನೈನಲ್ಲಿ ನಡೆದ ‘ದಿ ಚಾಂಪಿಯನ್ಸ್ ಕಾಲ್’ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಧೋನಿ, ನಾನು ಭಾರತದಲ್ಲಿ ನನ್ನ ಕೊನೆಯ ಏಕದಿನ ಪಂದ್ಯವನ್ನು ತವರಿನ ಪಿಚ್ ರಾಂಚಿ ಸ್ಟೇಡಿಯಂನಲ್ಲಿ ಆಡಿದ್ದೆ. ಹೀಗಾಗಿ ಟಿ20 ಕ್ರಿಕೆಟ್ ನ ನನ್ನ ಕೊನೆಯ ಪಂದ್ಯವನ್ನು ಚೆನ್ನೈನಲ್ಲಿ ಆಡಲಿದ್ದೇನೆ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವಿಟ್ಟರ್ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ ಧೋನಿ ತಮ್ಮ ನಿವೃತ್ತಿಯ ಬಗ್ಗೆ ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ. 'ನನ್ನ ಕೊನೆಯ ಪಂದ್ಯ ಮುಂದಿನ ವರ್ಷವೂ ಆಗಬಹುದು ಮತ್ತು 5 ವರ್ಷಗಳ ನಂತರವೂ ಆಗಬಹುದು' ಎಂದು ಅವರು ಹೇಳಿದರು.

Edited By : Nirmala Aralikatti
PublicNext

PublicNext

20/11/2021 11:09 pm

Cinque Terre

21.6 K

Cinque Terre

2