ಕೋಲ್ಕತಾ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಕೈವಶಕ್ಕೆ ಪಡೆದಿರುವ ಟೀಂ ಇಂಡಿಯಾ ಇಂದು 3ನೇ ಪಂದ್ಯವನ್ನು ಆಡಲಿದ್ದು, ಸರಣಿಯನ್ನು 3-0 ಅಂತರದಿಂದ ಗೆಲ್ಲುವ ತವಕದಲ್ಲಿದೆ.
ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೆಲವು ಬದಲಾವಣೆಗಳ ಮೂಲಕ ರೋಹಿತ್ ಶರ್ಮಾ ನೇತೃತ್ವದ ಪಡೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಕಳೆದೆರಡು ಪಂದ್ಯಗಳಲ್ಲಿ ಸ್ಥಾನ ಪಡೆಯದವರಿಗೆ ಇಂದು ಅವಕಾಶ ಸಿಗುವ ನಿರೀಕ್ಷೆ ಇದೆ. ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಆವೇಶ್ ಖಾನ್, ಯಜುವೇಂದ್ರ ಚಹಲ್ ಆಡುವ 11ರ ಬಳಗದಲ್ಲಿ ಕಾಣಿಸಿಕೊಳ್ಳುವ ಸಂಭವವಿದೆ.
PublicNext
21/11/2021 07:41 am