ನವದೆಹಲಿ: ದೇಶೀಯ ಕ್ರಿಕೆಟ್‌ನ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ವಿರುದ್ಧ ತಮಿಳುನಾಡು ತಂಡವು 4 ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿದೆ.
ದೆಹಲಿಯ ಫಿರೋಜ್ ಷಾ ಕೋಟ್ಲಾ ಆವರಣದ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ತಮಿಳುನಾಡು ತಂಡವು ಫೀಲ್ಡಿಂಗ್ ಆಯ್ದುಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡವು ಅಭಿನವ್ ಮನೋಹರ್ 46 ರನ್ ಹಾಗೂ ಪ್ರವೀಣ್ ದುಬೆ 33 ರನ್‌ಗಳ ಸಹಾಯದಿಂದ 7 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿತ್ತು.
ಬಳಿಕ ಬ್ಯಾಟಿಂಗ್ ನಡೆಸಿದ ತಮಿಳುನಾಡು ತಂಡವು 6 ನಷ್ಟಕ್ಕೆ 153 ರನ್ ಗಳಿಸಿ ಗೆದ್ದು ಬೀಗಿದೆ. ತಂಡದ ಪರ ಎಂ. ಶಾರುಖ್ ಖಾನ್ ಸ್ಫೋಟಕ ಬ್ಯಾಡಿಂಗ್ ಪ್ರದರ್ಶನ ನೀಡಿದರು. ಅವರು 15 ಎಸೆತಗಳಲ್ಲಿ 1 ಬೌಂಡರಿ, 3 ಸಿಕ್ಸ್ ಸೇರಿ 33 ರನ್ ಸಿಡಿಸಿದರು. ಉಳಿದಂತೆ ನಾರಾಯಣ ಜಗದೀಶ 41 ರನ್ ಗಳಿಸಿ ತಂಡದ ಗೆಲುವಿಗೆ ಕೊಡುಗೆ ನೀಡಿದರು.
PublicNext
22/11/2021 03:42 pm