ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IND vs NZ: ದೀಪಕ್ ಚಹರ್ ಸಿಕ್ಸರ್‌ಗೆ ಸೆಲ್ಯೂಟ್ ಹೊಡೆದ ಹಿಟ್‌ಮ್ಯಾನ್

ಕೋಲ್ಕತಾ: ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಭಾರತದ ವೇಗಿ ದೀಪಕ್ ಚಹರ್ ಸಿಡಿಸಿದ ಸಿಕ್ಸ್‌ಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸೆಲ್ಯೂಟ್ ಹೊಡೆದಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ತಮ್ಮದೆ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.

ಭಾರತದ ಇನ್ನಿಂಗ್ಸ್‌ನ 20ನೇ ಓವರ್‌ನ 4ನೇ ಎಸೆತದಲ್ಲಿ ದೀಪಕ್ ಚಹರ್ ಡೀಪ್ ಮಿಡ್ ವಿಕೆಟ್‌ನಲ್ಲಿ ಸಿಕ್ಸರ್ ಸಿಡಿಸಿದರು. ಇದರಿಂದ ಪ್ರಭಾವಿತನಾದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಡ್ರೆಸ್ಸಿಂಗ್ ರೂಮಿನಲ್ಲಿ ಸೆಲ್ಯೂಟ್ ಹೊಡೆದಿದ್ದಾರೆ. ಈ ವಿಡಿಯೋಕ್ಕೆ ಈಗ ನೆಟ್ಟಿಗರಿಂದ ಪ್ರಶಂಸೆಯ ಸುರಿಮಳೆ ಹರಿದು ಬರುತ್ತಿದೆ.

9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ದೀಪಕ್ ಚಹರ್ ಕೇವಲ 8 ಎಸೆತಗಳಲ್ಲಿ 21 ರನ್ (2 ಬೌಂಡರಿ, 1 ಸಿಕ್ಸರ್) ಸಿಡಿಸಿದರು. ಈ ಮೂಲಕ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದರು.

Edited By : Vijay Kumar
PublicNext

PublicNext

22/11/2021 04:02 pm

Cinque Terre

31.57 K

Cinque Terre

1

ಸಂಬಂಧಿತ ಸುದ್ದಿ