ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿವೀಸ್ ವಿರುದ್ಧದ ಸರಣಿಯಿಂದ ಕೆಎಲ್ ರಾಹುಲ್ ಔಟ್

ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ನವೆಂಬರ್ 25 ರಿಂದ ಕಾನ್ಪುರದಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಭಾರಿ ಆಘಾತ ಎದುರಾಗಿದೆ.

ತಂಡದ ಆರಂಭಿಕ ಆಟಗಾರ ಕೆ.ಎಲ್ ರಾಹುಲ್ ಗಾಯದ ಕಾರಣ 2 ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ ಎನ್ನಲಾಗಿದೆ. 'ಕೆಎಲ್ ರಾಹುಲ್ ಮೊದಲ ಟೆಸ್ಟ್ ಆಡುತ್ತಿಲ್ಲ' ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ.

ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಅಭ್ಯಾಸದ ವೇಳೆ ಬಹುತೇಕ ಎಲ್ಲಾ ಆಟಗಾರರು ಭಾಗವಹಿಸಿದ್ದರು. ಇದಾಗ್ಯೂ ತಂಡದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಮಾತ್ರ ಕಂಡು ಬಂದಿರಲಿಲ್ಲ. ಕೆಎಲ್ ರಾಹುಲ್ ಗಾಯದ ಸ್ವರೂಪವೇನು ಎಂಬುದು ಇನ್ನೂ ದೃಢಪಟ್ಟಿಲ್ಲ. ಹೀಗಾಗಿ ಅವರು ಅಭ್ಯಾಸದಿಂದ ಹೊರಗುಳಿದಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಪರ ಮಯಾಂಕ್ ಅಗರ್ವಾಲ್ ಹಾಗೂ ಶುಭಮನ್ ಗಿಲ್ ಅವರು ಇನಿಂಗ್ಸ್​ ಆರಂಭಿಸಲಿದ್ದಾರೆ.

ಭಾರತ ಟೆಸ್ಟ್ ತಂಡ: ಅಜಿಂಕ್ಯ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

Edited By : Vijay Kumar
PublicNext

PublicNext

24/11/2021 08:47 am

Cinque Terre

33.12 K

Cinque Terre

0

ಸಂಬಂಧಿತ ಸುದ್ದಿ